ಕಲಬುರಗಿ: ಎರಡು ಪ್ರತ್ಯೇಕ ರಸ್ತೆ ಅಪಘಾತ ಸಂಭವಿಸಿ ಓರ್ವ ವಿದ್ಯಾರ್ಥಿ ಸೇರಿ ಇಬ್ಬರು ಮೃತಪಟ್ಟಿದ್ದಾರೆ.
ಎರಡು ಪ್ರತ್ಯೇಕ ರಸ್ತೆ ಅಪಘಾತ: ವಿದ್ಯಾರ್ಥಿ ಸೇರಿ ಇಬ್ಬರ ಸಾವು - A road accident
ಕರ್ನಾಟಕ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಸಿನ್ನೂರ ಗ್ರಾಮದ ಆಕಾಶ್ ತನ್ನ ಬೈಕ್ ರಿಪೇರಿಗಾಗಿ ಅಫಜಲಪುರ ಬಂದು ಮರಳಿ ತನ್ನೂರಿಗೆ ತೆರಳುವಾಗ ಘಟನೆ ನಡೆದಿದೆ.
![ಎರಡು ಪ್ರತ್ಯೇಕ ರಸ್ತೆ ಅಪಘಾತ: ವಿದ್ಯಾರ್ಥಿ ಸೇರಿ ಇಬ್ಬರ ಸಾವು road-accident](https://etvbharatimages.akamaized.net/etvbharat/prod-images/768-512-9446589-thumbnail-3x2-dgjgh.jpg)
ಅಫಜಲಪೂರದ ಮಾದಬಾಳ ತಾಂಡಾ ಹತ್ತಿರ ಕಾರ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ವಿದ್ಯಾರ್ಥಿ ಆಕಾಶ್ ಅಳ್ಳಗಿ ಎಂಬಾತ ಮೃತಪಟ್ಟಿದ್ದಾನೆ. ಕರ್ನಾಟಕ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಸಿನ್ನೂರ ಗ್ರಾಮದ ಆಕಾಶ್ ತನ್ನ ಬೈಕ್ ರಿಪೇರಿಗಾಗಿ ಅಫಜಲಪುರ ಬಂದು ಮರಳಿ ತನ್ನೂರಿಗೆ ತೆರಳುವಾಗ ಘಟನೆ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿದ ಪಿಎಸ್ಐ ವಿಶ್ವನಾಥ ಮುದರೆಡ್ಡಿ ಪರೀಶಿಲನೆ ನಡೆಸಿದ್ದಾರೆ. ಈ ಕುರಿತು ಅಫಜಲಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದಡೆ ಫರತಾಬಾದ ಹತ್ತಿರದ ಜೇವರ್ಗಿ ಶಹಾಬಾದ ರಸ್ತೆ ಬಳಿ ಬೈಕ್ ಮತ್ತು ಲಾರಿ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಓರ್ವ ಯುವಕ ಮೃತಪಟ್ಟಿದ್ದು, ಇನ್ನೋರ್ವ ಗಾಯಗೊಂಡಿರುವ ಘಟನೆ ನಡೆದಿದೆ. ಮೃತ ಯುವಕ ಫರತಾಬಾದ ಗ್ರಾಮದವನು ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಫರತಾಬಾದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.