ಕರ್ನಾಟಕ

karnataka

ETV Bharat / state

ಕರ್ತವ್ಯಲೋಪ: ಇಬ್ಬರನ್ನು ಅಮಾನತುಗೊಳಿಸಿದ ಕಲಬುರಗಿ ಜಿಲ್ಲಾಧಿಕಾರಿ - alanda news

ಕೊರೊನಾ ನಿಯಂತ್ರಿಸಲು ಚೆಕ್​ಪೋಸ್ಟ್​ಗಳಲ್ಲಿ ನಿಯೋಜಿಸಲಾಗಿದ್ದ ಇಬ್ಬರನ್ನು ಕರ್ತವ್ಯಲೋಪ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.

two-staff-suspended-in-kalaburgi
ಕರ್ತವ್ಯಲೋಪ: ಇಬ್ಬರನ್ನು ಅಮಾನತುಗೊಳಿಸಿದ ಕಲಬುರಗಿ ಜಿಲ್ಲಾಧಿಕಾರಿ

By

Published : Mar 2, 2021, 12:02 AM IST

ಕಲಬುರಗಿ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಾದ ಕಾರಣ ಗಡಿ ಭಾಗದಲ್ಲಿ ಸ್ಥಾಪಿಸಿರುವ ಚೆಕ್‌ಪೋಸ್ಟ್​ಗಳಲ್ಲಿ ಕಾರ್ಯನಿರ್ವಹಿಸಬೇಕಾದ ಸಿಬ್ಬಂದಿ ಬೇಜವಾಬ್ದಾರಿ ತೋರಿದ ಹಿನ್ನೆಲೆ ಇಬ್ಬರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ವಿವಿ ಜ್ಯೋತ್ಸ್ನಾ ಆದೇಶ ಹೊರಡಿಸಿದ್ದಾರೆ.

ಕೊರೊನಾ ಹಿನ್ನಲೆಯಲ್ಲಿ ಆಳಂದ ತಾಲೂಕಿನ ಹಿರೋಳ್ಳಿ ಗಡಿಯಲ್ಲಿ ಸ್ಥಾಪಿಸಲಾಗಿರುವ ಚೆಕ್‌ಪೋಸ್ಟ್‌ದಲ್ಲಿ ಕರ್ತವ್ಯಕ್ಕೆ ನಿಯೋಜನೆ ಮಾಡಿದರೂ ಹೋಗದೆ ಕರ್ತವ್ಯ ನಿರ್ಲಕ್ಷ್ಯ ಮಾಡಿದ ಹಿರೋಳ್ಳಿ ಗ್ರಾಮ ಲೆಕ್ಕಾಧಿಕಾರಿ ರವೀಂದ್ರ ಮತ್ತು ಆರೋಗ್ಯ ಸಹಾಯಕ ರೇವಣಸಿದ್ದ ಎಂಬುವರನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ:ಮುತ್ತಿನರಾಶಿ ಮೂರು ಪಾಲು ಆತಲೇ ಪರಾಕ್​: ಮೈಲಾರಲಿಂಗೇಶ್ವರ ಗೊರವಪ್ಪನ ಕಾರಣಿಕ!

ಅಮಾನತುಗೊಂಡ ಇಬ್ಬರನ್ನೂ ಚೆಕ್​ಪೋಸ್ಟ್​ಗೆ ನಿಯೋಜಿಸಲಾಗಿತ್ತು. ಆದರೆ ಅಲ್ಲಿಗೆ ಹೋಗದೆ ಬೇಜವಾಬ್ದಾರಿ ತೋರಿದ ಸಿಬ್ಬಂದಿ ಮೇಲೆ ದೂರುಗಳು ಬಂದಿದ್ದವು. ವರದಿ ತರಿಸಿಕೊಂಡು ಇಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ.

ABOUT THE AUTHOR

...view details