ಕಲಬುರಗಿ:ಮೀನು ಹಿಡಿಯಲು ಹೋಗಿದ್ದ ಯುವಕರಿಬ್ಬರು ನೀರುಪಾಲಾಗಿರುವ ಘಟನೆ ಜೇವರ್ಗಿ ತಾಲೂಕಿನ ಹಾಲಗಡ್ಲಾ ಕೆರೆಯಲ್ಲಿ ನಡೆದಿದೆ.
ಮೀನು ಹಿಡಿಯಲು ಹೋಗಿದ್ದ ಯುವಕರು ನೀರುಪಾಲು - ಇಬ್ಬರು ಯುವಕರು ಸಾವು
ಮೀನು ಹಿಡಿಯಲು ಹೋಗಿದ್ದ ಯುವಕರಿಬ್ಬರು ನೀರುಪಾಲಾಗಿರುವ ಘಟನೆ ಜೇವರ್ಗಿ ತಾಲೂಕಿನ ಹಾಲಗಡ್ಲಾ ಕೆರೆಯಲ್ಲಿ ನಡೆದಿದೆ.

Two youth died when they went to catching fish in lake
ಬಸಣ್ಣ (24), ನಾಗಣ್ಣ (18) ಮೃತ ಯುವಕರು. ಜೇವರ್ಗಿ ಹರಣೂರ ಗ್ರಾಮದ ನಿವಾಸಿಗಳಾದ ಇವರು, ಇಂದು ಬೆಳಗ್ಗೆ ಹಾಲಗಡ್ಲಾ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಗ್ರಾಮಸ್ಥರ ಸಹಾಯದಿಂದ ಯುವಕರ ಶವ ಹೊರ ತೆಗೆದಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.