ಕರ್ನಾಟಕ

karnataka

ETV Bharat / state

ಉಮೇದುವಾರಿಕೆ ಸಲ್ಲಿಕೆಗೂ ಮುನ್ನ ಜಾಧವ್​​​ ಟೆಂಪಲ್​ ರನ್​​​ - news kannada

ಉಮೇದುವಾರಿಕೆ ಸಲ್ಲಿಕೆಗೂ ಮುನ್ನ ಲೋಕಸಭಾ ಬಿಜೆಪಿ ಅಭ್ಯರ್ಥಿ ಉಮೇಶ್​ ಜಾಧವ್​ ಟೆಂಪಲ್​ ರನ್ ಆರಂಭಿಸಿದ್ದಾರೆ. ಬೆಳಗಿನ ಜಾವ ಕುಟುಂಬ ಸಮೇತರಾಗಿ ಚಿಂಚೋಳಿ ತಾಲೂಕಿನ ರಟಕಲ್ ರೇವಣಸಿದ್ದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.

ಸಾಂಕೇತಿಕವಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಿದ ಲೋಕಸಭಾ ಬಿಜೆಪಿ ಅಭ್ಯರ್ಥಿ ಉಮೇಶ್​ ಜಾಧವ್

By

Published : Apr 3, 2019, 12:27 PM IST

ಕಲಬುರಗಿ: ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಇಂದು ಸಾಂಕೇತಿಕವಾಗಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.

ಶ್ರೀ ಶರಣ ಬಸವೇಶ್ವರ ದೇವಸ್ಥಾನಲ್ಲಿ ಆಶೀರ್ವಾದ ಪಡೆದು ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಜಾಧವ್, ಸರಿಯಾಗಿ 11:27ಕ್ಕೆ ಜಿಲ್ಲಾ ಚುನಾವಣಾ ಅಧಿಕಾರಿ ಆರ್. ವೆಂಕಟೇಶ್ ಕುಮಾರ್ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್, ಬಾಬುರಾವ್ ಚಿಂಚನಸೂರ್, ಧರ್ಮಣ್ಣ ದೊಡ್ಮನಿ, ಎಂಎಲ್​ಸಿ ಬಿ.ಜಿ.ಪಾಟೀಲ್ ಉಪಸ್ಥಿತರಿದ್ದರು.

ಸಾಂಕೇತಿಕವಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಿದ ಲೋಕಸಭಾ ಬಿಜೆಪಿ ಅಭ್ಯರ್ಥಿ ಉಮೇಶ್​ ಜಾಧವ್

ಬೇಳಿಗ್ಗೆ ಸಾಂಕೇತಿಕವಾದ ನಾಮಪತ್ರ ಸಲ್ಲಿಸಿದ ಜಾಧವ್​ ಇಂದು ಮಧ್ಯಾಹ್ನ 2 ಗಂಟೆಗೆ ನಗರದ ನಗರೇಶ್ವರ ಶಾಲೆಯಿಂದ ಹೊರಗೆ ಜಾಥಾ ಮೂಲಕ ಆಗಮಿಸಿ ಸಾಮೂಹಿಕವಾಗಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ.

ABOUT THE AUTHOR

...view details