ಸೇಡಂ(ಕಲಬುರ್ಗಿ) :ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ನಮ್ಮ ನಾಯಕರು. ಅವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. ಈ ಬಗ್ಗೆ ಖುದ್ದು ಡಿಜಿಯನ್ನು ಭೇಟಿ ಮಾಡಿ ಮಾಹಿತಿ ಪಡೆಯುವುದಾಗಿ ಸಂಸದ ಡಾ ಉಮೇಶ್ ಜಾಧವ್ ಹೇಳಿದರು.
ಖರ್ಗೆಯವರು ನಮ್ಮ ನಾಯಕರು, ಅವ್ರಿಗೆ ಬೆದರಿಕೆ ಹಾಕಿದ ಪ್ರಕರಣ ತನಿಖೆಯಾಗಲಿ - ಸಂಸದ ಜಾಧವ್ - ಕಲಬುರಗಿ
ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆಯವರಿಗೆ ಜೀವ ಬೆದರಿಕೆ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶೀಘ್ರ ತನಿಖೆ ನಡೆಸುವಂತೆ ಒತ್ತಾಯಿಸುತ್ತೇನೆ ಎಂದು ಸಂಸದ ಡಾ. ಉಮೇಶ ಜಾಧವ ಹೇಳಿದರು.
ಸಂಸದ ಡಾ. ಉಮೇಶ ಜಾಧವ
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ದೊಡ್ಡ ನಾಯಕರು. ಅಂತಹವರಿಗೆ ಕೊಲೆ ಬೆದರಿಕೆ ಬಂದಿರುವುದರ ಬಗ್ಗೆ ತನಿಖೆಯಾಗಲೇಬೇಕು. ಯಾವ ಉದ್ದೇಶಕ್ಕಾಗಿ ಬೆದರಿಕೆ ಬಂದಿದೆ ಎಂಬುದೇ ಅರ್ಥವಾಗುತ್ತಿಲ್ಲ. ಕೂಡಲೇ ತಪ್ಪಿತಸ್ಥರ ಬಂಧನವಾಗಬೇಕು. ಹೀಗೆ ಬಿಟ್ಟರೆ ಮುಂದೆ ನಮ್ಗೂ ಬೆದರಿಕೆ ಬರಬಹುದು. ಈ ಬಗ್ಗೆ ಸರ್ಕಾರದ ಗಮನ ಸೆಳೆದು ನಮ್ಮ ನಾಯಕರಿಗೆ ರಕ್ಷಣೆ ನೀಡಲು ಕೋರುತ್ತೇನೆ ಎಂದರು.