ಕರ್ನಾಟಕ

karnataka

ETV Bharat / state

ಡಿಸಿಎಂ ಗೋವಿಂದ ಕಾರಜೋಳ ಕಾಣೆ... ಹುಡುಕಿಕೊಡುವಂತೆ ಕನ್ನಡಪರ ಸಂಘಟನೆಗಳ ಮನವಿ - DCM Govinda Karajola‘

ಕಲಬುರಗಿ ಜಿಲ್ಲಾ ಉಸ್ತುವಾರಿ, 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಗೋವಿಂದ ಕಾರಜೋಳ ಕಾಣೆಯಾಗಿದ್ದಾರೆ ಹುಡುಕಿ ಕೊಡಿ ಎಂದು ಕನ್ನಡ ಪರ ಸಂಘಟನೆಗಳ ಒಕ್ಕೂಟ ಪೋಲಿಸ್ ಕಮಿಷನರ್ ಅವರಿಗೆ ಮನವಿ ಮಾಡಿದೆ.

union-of-pro-kannada-organizations-
union-of-pro-kannada-organizations-

By

Published : Jan 31, 2020, 9:14 PM IST

ಕಲಬುರಗಿ: ಡಿಸಿಎಂ ಗೋವಿಂದ ಕಾರಜೋಳ ಕಾಣೆಯಾಗಿದ್ದಾರೆ ಹುಡುಕಿಕೊಡಿ ಅಂತಾ ಕಲಬುರಗಿಯಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ಮನವಿ ಮಾಡಿವೆ..

ಡಿಸಿಎಂ ಗೋವಿಂದ ಕಾರಜೋಳ ಹುಡುಕಿಕೊಡುವಂತೆ ಮನವಿ

ಹೌದು, ಕಲಬರುಗಿ ಜಿಲ್ಲಾ ಉಸ್ತುವಾರಿ, 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಗೋವಿಂದ ಕಾರಜೋಳ ಕಾಣೆಯಾಗಿದ್ದಾರೆ ಹುಡುಕಿ ಕೊಡಿ ಎಂದು ಕನ್ನಡಪರ ಸಂಘಟನೆಗಳ ಒಕ್ಕೂಟ ಪೊಲೀಸ್ ಕಮಿಷನರ್ ಅವರಿಗೆ ಮನವಿ ಮಾಡಿವೆ.

ಫೆಬ್ರವರಿ 5 ರಿಂದ 7ರವರೆಗೆ ಗುಲ್ಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೆಳನಕ್ಕೆ ಕೇವಲ ಐದು ದಿನ ಮಾತ್ರ ಬಾಕಿ ಉಳಿದಿದೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಸ್ವಾಗತ ಸಮಿತಿ ಅಧ್ಯಕ್ಷರಾದ ಗೋವಿಂದ ಕಾರಜೋಳ ಜಿಲ್ಲೆಯತ್ತ ಮುಖ ಮಾಡಿಯೂ ನೋಡಿಲ್ಲ. ಇದುವರೆಗೂ ಕೇವಲ ಒಂದು ಸಭೆ ನಡೆಸಿ ಕಾಣೆಯಾಗಿದ್ದಾರೆ‌. ಈ ಹಿನ್ನೆಲೆ ಕಾರಜೋಳರನ್ನು ಹುಡುಕಿಕೊಡಿ ಎಂದು ಕನ್ನಡ ಸಂಘಟನೆ ಸದಸ್ಯರು ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

ABOUT THE AUTHOR

...view details