ಕಲಬುರಗಿ:ಭೀಮಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಶಿವೂರು ಗ್ರಾಮದ ಬಳಿ ನಡೆದಿದೆ.
ಭೀಮಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ - ಕಲಬುರಗಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಸುದ್ದಿ
ಭೀಮಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಅಪರಿಚಿತ ವ್ಯಕ್ತಿಯ ಶವ
ಸುಮಾರು 30 ವರ್ಷದ ವ್ಯಕ್ತಿಯ ಶವ ದೊರೆತಿದ್ದು, ದುಷ್ಕರ್ಮಿಗಳು ಕೊಲೆ ಮಾಡಿ ಗೋಣಿ ಚೀಲದಲ್ಲಿ ಶವ ಕಟ್ಟಿ ನದಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಶವ ನೀರಿನಲ್ಲಿ ತೇಲುತ್ತಿದ್ದು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.