ಕಲಬುರಗಿ: ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರಕ್ಕೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಸಿದರು.
ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರ ಚುನಾವಣೆಗೆ ನಾಮಪತ್ರ ಸಲ್ಲಿಸಿದ ವಾಟಾಳ್ - ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರ ಚುನಾವಣೆಗೆ ವಾಟಾಳ್ ನಾಗರಾಜ್
ಕಲಬುರಗಿಗೆ ಆಗಮಿಸಿದ ವಾಟಾಳ್ ನಾಗರಾಜ್ ಮಿನಿ ವಿಧಾನಸೌದ ಆರ್.ಸಿ.ಕಚೇರಿಗೆ ತೆರಳಿ ಚುನಾವಣಾಧಿಕಾರಿ ಎನ್.ವಿ.ಪ್ರಸಾದ್ ಅವರಿಗೆ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರ ಚುನಾವಣೆಗೆ ನಾಮಪತ್ರ ಸಲ್ಲಿಸಿದ ವಾಟಾಳ್
ಬಳಿಕ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕಲಬುರಗಿ, ಕೊಪ್ಪಳ ಸೇರಿದಂತೆ ಹೈದ್ರಾಬಾದ್ ಕರ್ನಾಟಕ ಭಾಗದ ಉಪಾಧ್ಯಾಯರು ಈಶಾನ್ಯ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸುವಂತೆ ಮನವಿ ಮಾಡಿದ್ದರು. ಹೀಗಾಗಿ, ಈ ಭಾಗದಲ್ಲಿ ಚುನಾವಣೆಗೆ ಸ್ಪರ್ಧಿಸಲು ಬಂದಿರುವೆ ಎಂದರು.
ಇದರ ಜೊತೆಗೆ, ಹೈದ್ರಾಬಾದ್-ಕರ್ನಾಟಕ ಸಮಸ್ಯೆಗಳ ವಿರುದ್ಧ ಹೋರಾಟ ಮಾಡಲು ಬಂದಿರುವುದಾಗಿ ಅವರು ತಿಳಿಸಿದರು.