ಕಲಬುರಗಿ:ಕನ್ನಡಿಗರ ಮೇಲೆ ಶಿವಸೇನೆ ಮತ್ತು ಎಂಇಎಸ್ ಕಾರ್ಯಕರ್ತರು ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿ ವೀರ ಕನ್ನಡಿಗರ ಸೇನೆ ನೇತೃತ್ವದಲ್ಲಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಕನ್ನಡಿಗರ ಮೇಲೆ ದೌರ್ಜನ್ಯ ಆರೋಪ: ಶಿವಸೇನೆ-ಎಂಇಎಸ್ ವಿರುದ್ಧ ಪ್ರತಿಭಟನೆ - ಎಂಇಎಸ್ ಕಾರ್ಯಕರ್ತರ ದೌರ್ಜನ್ಯ
ಕನ್ನಡಿಗರ ಮೇಲೆ ಶಿವಸೇನೆ ಮತ್ತು ಎಂಇಎಸ್ ಕಾರ್ಯಕರ್ತರು ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿ ವೀರ ಕನ್ನಡಿಗರ ಸೇನೆ ನೇತೃತ್ವದಲ್ಲಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಉದ್ಧವ್ ಠಾಕ್ರೆ ಭಾವಚಿತ್ರ ದಹಿಸಿ ವೀರ ಕನ್ನಡಿಗರ ಸೇನೆ ಪ್ರತಿಭಟನೆ
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ಪ್ರತಿಭಟನಾಕಾರರು, ಎಂಇಎಸ್ ಮತ್ತು ಶಿವಸೇನೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಪ್ರತ್ಯೇಕತೆಯ ಹೆಸರಲ್ಲಿ ಶಿವಸೇನೆ ಹಾಗೂ ಎಂಇಎಸ್ ಮುಖಂಡರು ಮತ್ತು ಕಾರ್ಯಕರ್ತರು ಪುಂಡಾಟಿಕೆ ನಡೆಸುತ್ತಿದ್ದಾರೆ. ಗಡಿಯಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ. ಇಂತಹವರನ್ನು ಗಡಿಪಾರು ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.