ಕಲಬುರಗಿ: ಅಧಿಕಾರಿಯೊಬ್ಬರು ರಾಜಾರೋಷವಾಗಿ ಲಂಚ ಪಡೆಯುತ್ತಿದ್ದಾರೆ ಎನ್ನಲಾದ ವಿಡಿಯೋ ಬಹಿರಂಗಗೊಂಡಿದೆ. ಗುತ್ತಿಗೆದಾರನಿಂದ ಪಿಡಬ್ಲ್ಯೂಡಿ ಎಇ ಲಂಚ ಪಡೆಯುತ್ತಿರುವ ದೃಶ್ಯ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಅಧಿಕಾರಿ ಲಂಚ ಪಡೆಯುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ರಸ್ತೆ ಕಾಮಗಾರಿಗೆ ಲಂಚ ಸ್ವೀಕರಿಸಿದ ಆರೋಪ: ಅಧಿಕಾರಿಯ ವಿಡಿಯೋ ವೈರಲ್ - ಚಿಂಚೋಳಿ ತಾಲೂಕಿನ ಪೋತಂಗಲ ಗ್ರಾಮದಲ್ಲಿ ನಡೆದ ಒಂದು ಕೋಟಿ ರಸ್ತೆ ಕಾಮಗಾರಿ
ಅಧಿಕಾರಿಯೋರ್ವರು ಲಂಚ ಸ್ವೀಕಾರ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಕಲಬುರಗಿಯಲ್ಲಿ ರಸ್ತೆ ಕಾಮಗಾರಿಗೆ ಲಂಚ ಸ್ವೀಕರಿಸಿದ ಆರೋಪ
ಚಿಂಚೋಳಿ ತಾಲೂಕಿನ ಪೋತಂಗಲ ಗ್ರಾಮದಲ್ಲಿ ನಡೆದ ಒಂದು ಕೋಟಿ ರೂ ವೆಚ್ಚದ ರಸ್ತೆ ಕಾಮಗಾರಿಗೆ ಲಂಚ ನೀಡುವಂತೆ ಅಧಿಕಾರಿ ಬೇಡಿಕೆ ಇಟ್ಟಿದ್ದರಂತೆ. ಅದರಂತೆ, ಇಂದು ಬೈಕ್ ಮೇಲೆ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಆಗಮಿಸಿದ ಎಇ ಹಣ ಪಡೆದು ಜೇಬಿಗೆ ಹಾಕಿಕೊಳ್ಳುವ ದೃಶ್ಯವಿದು ಎಂದು ಹೇಳಲಾಗಿದೆ.
ಇದನ್ನೂ ಓದಿ:ಬಿಜೆಪಿ ಸೇರಲು ಸುಮಲತಾಗೆ ಮಾಜಿ ಸಚಿವ ಯೋಗೇಶ್ವರ್ ಆಹ್ವಾನ