ಕಲಬುರಗಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶಾಸಕ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಹಾಗೂ ರೈತರು ಬುಧವಾರ ಜಂಟಿಯಾಗಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ಮುಕ್ತಾಯವಾದ ಬಳಿಕ ಅವರು ತಮ್ಮೊಂದಿಗೆ ತಂದಿದ್ದ ತೊಗರಿ ಗಿಡಗಳನ್ನು ಅಲ್ಲಿಯೇ ಬಿಟ್ಟು ಹೋಗಿದ್ದರು. ಹೀಗೆ ಬಿಸಾಡಿ ಹೋಗಿದ್ದ ಕಸವನ್ನು ಸ್ವಚ್ಛಗೊಳಿಸುವ ಮೂಲಕ ಅಶೋಕ ನಗರ ಪೊಲೀಸ್ ಇನ್ಸ್ಪೆಕ್ಟರ್ ಪಂಡಿತ್ ಸಾಗರ್ ಸಾಮಾಜಿಕ ಬದ್ಧತೆ ಮೆರೆದಿದ್ದಾರೆ.
ಜಿಲ್ಲೆಯಲ್ಲಿ ನೆಟೆ ರೋಗಕ್ಕೆ ತುತ್ತಾಗಿರುವ ತೊಗರಿ ಬೆಳೆಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದ್ದರು. ಟ್ರ್ಯಾಕ್ಟರ್ಗಳಲ್ಲಿ ನೆಟೆ ರೋಗ ಬಾಧೆಯಿಂದ ಒಣಗಿದ ತೊಗರಿ ಗಿಡಗಳನ್ನು ತಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಬಿಟ್ಟು ತೆರಳಿದ್ದರು.