ಕಲಬುರಗಿ:ಮಲ್ಲಾಬಾದ ಏತ ನೀರಾವರಿ ಯೋಜನೆಯ ನಾಲೆಗೆ ಸತತ 10 ದಿನಗಳಿಂದ ಹೆಚ್ಚಿನ ಪ್ರಮಾಣದ ನೀರು ಹರಿಬಿಡುತ್ತಿದ್ದು, ಪರಿಣಾಮ ಜೇವರ್ಗಿ ತಾಲೂಕಿನ ಇಜೇರಿ ಗ್ರಾಮದ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ.
ನಾಲೆಗೆ ಹರಿದ ಅಧಿಕ ಪ್ರಮಾಣದ ನೀರು... ಸಂಕಷ್ಟದಲ್ಲಿ ಜೇವರ್ಗಿಯ ಇಜೇರಿ ಗ್ರಾಮ - Water,
ಮಲ್ಲಾಬಾದ ಏತ ನೀರಾವರಿ ಯೋಜನೆಯ ನಾಲೆಗೆ ಸತತ 10 ದಿನಗಳಿಂದ ಹೆಚ್ಚಿನ ಪ್ರಮಾಣದ ನೀರು ಹರಿಬಿಡುತ್ತಿದ್ದು, ಇಜೇರಿ ಗ್ರಾಮದ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಈ ಬಗ್ಗೆ ಕೆಬಿಜೆಎನ್ಎಲ್ ಅಧಿಕಾರಿಗಳಿಗೆ ತಿಳಸಿದರು ನಾಲೆಗೆ ನೀರು ಹರಿಸುವುದನ್ನು ಬಿಟ್ಟಿಲ್ಲ. ಹೀಗಾಗಿ ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ನೀರು ನಾಲೆಗಳ ಮೂಲಕ ಹರಿದು ಹೋಗಬೇಕು. ಆದ್ರೆ ಕಳಪೆ ಕಾಮಗಾರಿಯಿಂದ ನಾಲೆಗಳು ಕೊಚ್ಚಿ ಹೋಗಿದ್ದು, ನೀರು ತಗ್ಗು ಪ್ರದೇಶದಲ್ಲಿರುವ ಇಜೇರಿ ಗ್ರಾಮದ ಮನೆಗಳಿಗೆ ನುಗ್ಗಿದೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಈ ಬಗ್ಗೆ ಕೆಬಿಜೆಎನ್ಎಲ್ ಅಧಿಕಾರಿಗಳಿಗೆ ತಿಳಸಿದರು ನಾಲೆಗೆ ನೀರು ಹರಿಸುವುದನ್ನು ಬಿಟ್ಟಿಲ್ಲ. ಹೀಗಾಗಿ ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಕೂಡಲೇ ಅಧಿಕಾರಿಗಳು ನೀರಿನ ಹೊರ ಹರಿವನ್ನು ತಡೆಯಬೇಕು. ಹಾನಿಗೊಳಗಾದ ಮನೆಗಳಿಗೆ ನಷ್ಟದ ಪರಿಹಾರ ಹಣವನ್ನು ನೀಡಬೇಕು. ಇಲ್ಲವಾದಲ್ಲಿ ಗ್ರಾಮಸ್ಥರು ರಸ್ತೆಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಲಿದೆ ಎಂದು ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರವಣಕುಮಾರ್ ಡಿ. ನಾಯಕ್ ಎಚ್ಚರಿಕೆ ನೀಡಿದ್ದಾರೆ.