ಕಲಬುರಗಿ:ಕೊರೊನಾ ನಿಯಂತ್ರಣಕ್ಕಾಗಿ ಗಡಿ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಿರುವ ಕಾರಣ ಗುಲ್ಬರ್ಗಾ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗಿನ ಜಾವ ಐದು ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ.
ಈ ಕಾರಣಕ್ಕೆ ವಾರಾಂತ್ಯದಲ್ಲಿರುವ ಗುಲ್ಬರ್ಗಾ ವಿಶ್ವವಿದ್ಯಾಲಯದ ಎಲ್ಲ ಪರೀಕ್ಷೆಗಳನ್ನು ರದ್ದು ಮಾಡಿ ಆದೇಶ ಹೊರಡಿಸಲಾಗಿದೆ. ಆಗಸ್ಟ್ 7 ಮತ್ತು 8 ಹಾಗೂ 14ರಂದು ನಡೆಯುವ ಪರೀಕ್ಷೆಗಳು ರದ್ದುಗೊಂಡಿವೆ.