ಕಲಬುರಗಿ: ಕಾಡು ಹಂದಿ ದಾಳಿ ನಡೆಸಿ ತೀವ್ರವಾಗಿ ಗಾಯಗೊಂಡಿದ್ದ ರೈತ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆ ಸೇಡಂ ತಾಲೂಕಿನ ಮುನಕನಪಲ್ಲಿ ಗ್ರಾಮದಲ್ಲಿ ನಡೆದಿದೆ.
ಕಲಬುರಗಿಯಲ್ಲಿ ಕಾಡು ಹಂದಿ ದಾಳಿ: ತೀವ್ರ ರಕ್ತಸ್ರಾವದಿಂದ ರೈತ ಸಾವು - undefined
ಕಲಬುರ್ಗಿ ಜಿಲ್ಲೆ ಸೇಡಂ ತಾಲೂಕಿನ ಮುನಕನಪಲ್ಲಿ ಗ್ರಾಮದಲ್ಲಿ ಭೀಮೇಶಪ್ಪ ಕಡತಾಲ(48) ಎಂಬ ರೈತನ ಮೇಲೆ ಹಂದಿ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡಿದ್ದ ಅವರು ಮೃತಪಟ್ಟಿದ್ದಾರೆ.

ಕಾಡು ಹಂದಿ ದಾಳಿ: ತೀವ್ರ ರಕ್ತಸ್ರಾವದಿಂದ ಮೃತಪಟ್ಟ ರೈತ
ಮುನಕನಪಲ್ಲಿಯ ಭೀಮೇಶಪ್ಪ ಕಡತಾಲ(48) ಮೃತ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಠಾತ್ತಾಗಿ ಭೀಮೇಶಪ್ಪನ ಮೇಲೆ ಕಾಡು ಹಂದಿ ದಾಳಿ ನಡೆಸಿದೆ. ಮೈಮೇಲೆ ಮನಬಂದಂತೆ ಕೋಡಿನಿಂದ ಇರಿದ ಪರಿಣಾಮ ತೀವ್ರ ರಕ್ತಸ್ರಾವವಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ರೈತ ಸಾವನ್ನಪ್ಪಿದ್ದಾರೆ.
ಈ ಕುರಿತು ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.