ಕಲಬುರಗಿ: ಬೈಕ್ನಿಂದ ಆಯತಪ್ಪಿ ಬಿದ್ದ ಮಹಿಳೆ ಮೇಲೆ ಬಸ್ ಹರಿದ ಪರಿಣಾಮ ಸ್ಥಳದಲ್ಲಿಯೇ ಮಹಿಳೆ ದುರ್ಮರಣ ಹೊಂದಿರುವ ಘಟನೆ ನಗರದ ಜೇವರ್ಗಿ ಕ್ರಾಸ್ ಬಳಿ ನಡೆದಿದೆ.
ಬೈಕ್ನಿಂದ ಆಯತಪ್ಪಿ ಬಿದ್ದ ಮಹಿಳೆ ಮೇಲೆ ಬಸ್ ಹರಿದು ಸ್ಥಳದಲ್ಲೇ ಸಾವು - kalburagi Woman dies in accident
ಕಲಬುರಗಿ ಬಳಿ ಬೈಕ್ನಿಂದ ಆಯತಪ್ಪಿ ಬಿದ್ದ ಮಹಿಳೆ ಮೇಲೆ ಬಸ್ ಹರಿದ ಪರಿಣಾಮ ಸ್ಥಳದಲ್ಲಿಯೇ ಮಹಿಳೆ ದುರ್ಮರಣ ಹೊಂದಿದ್ದಾರೆ.
ಸಾವನ್ನಪ್ಪಿದ ಮಹಿಳೆ
ನಸೀಮಾ ಬೇಗಂ (55) ಸ್ಥಳದಲ್ಲೇ ಮೃತಪಟ್ಟಿದ್ದು, ಇವರು ತಮ್ಮ ಪತಿ ಮೆಹಬೂಬ್ ಸಾಬ್ ಜೊತೆ ಬೈಕ್ ಮೇಲೆ ತೆರಳುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಇಬ್ಬರು ನೆಲಕ್ಕೆ ಬಿದ್ದಿದ್ದಾರೆ. ಈ ವೇಳೆ ಪಕ್ಕದಲ್ಲಿ ಸಾಗುತ್ತಿದ್ದ ಸಾರಿಗೆ ಬಸ್ ಚಕ್ರದಡಿ ಸಿಲುಕಿ ನಸೀಮಾ ಬೇಗಂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನು ಮಹಿಳೆಯ ರುಂಡ ಸಂಪೂರ್ಣ ಚಿದ್ರವಾಗಿದ್ದು, ಪತಿ ಮೆಹಬೂಬ್ ಸಾಬ್ಗೆ ಚಿಕ್ಕಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಇನ್ನು ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.