ಕಲಬುರಗಿ: ಪ್ರವಾಹದಿಂದ ರಕ್ಷಣೆಗಾಗಿ ಆಶ್ರಯ ಪಡೆದ ಸರ್ಕಾರಿ ಶಾಲೆಯಲ್ಲಿಯೇ ಗರ್ಭಿಣಿಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ನಾಗಿದಲಾಯಿ ಗ್ರಾಮದಲ್ಲಿ ನಡೆದಿದೆ.
ಆಶ್ರಯ ಪಡೆದ ಸರ್ಕಾರಿ ಶಾಲೆಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ - sheltered government school
ಸುರಕ್ಷತೆ ದೃಷ್ಟಿಯಿಂದ ಗ್ರಾಮದ ಸರ್ಕಾರಿ ಶಾಲೆ ಕಟ್ಟಡದಲ್ಲಿ ರಕ್ಷಣೆ ಪಡೆದಿದ್ದ ಗೀತಾ ಎಂಬ ಗರ್ಭಿಣಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಕಲಬುರಗಿಯ ಚಿಂಚೋಳಿ ತಾಲೂಕಿನ ನಾಗಿದಲಾಯಿ ಗ್ರಾಮದಲ್ಲಿ ನಡೆದಿದೆ.
ಆಶ್ರಯ ಪಡೆದ ಸರ್ಕಾರಿ ಶಾಲೆಯಲ್ಲೇ ಮಗುವಿಗೆ ಜನ್ಮ
ಸುರಕ್ಷತೆ ದೃಷ್ಟಿಯಿಂದ ಗ್ರಾಮದ ಸರ್ಕಾರಿ ಶಾಲಾ ಕಟ್ಟಡದಲ್ಲಿ ರಕ್ಷಣೆ ಪಡೆದಿದ್ದ ಗೀತಾ, ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಹೆರಿಗೆ ನೋವು ತೀವ್ರವಾಗಿದ್ದರಿಂದ ಶಾಲಾ ಕಟ್ಟದಲ್ಲೇ ಶತಾಯುಷಿ ಅಜ್ಜಿ ನಾಗಮ್ಮ ಎಂಬುವರು ಇವರಿಗೆ ಸಹಜ ಹೆರಿಗೆ ಮಾಡಿಸಿದ್ದಾರೆ.
ಹೆರಿಗೆ ನಂತರ ಮಹಿಳೆಯನ್ನು ಸಾಲೇಬಿರನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಇದೇ ತಿಂಗಳು 20 ರಂದು ಹೆರಿಗೆ ದಿನಾಂಕ ನೀಡಲಾಗಿತ್ತು. ಆದ್ರೆ ವಾರ ಮೊದಲೇ ಹೆರಿಗೆಯಾಗಿದೆ. ತಾಯಿ ಮಗು ಆರೋಗ್ಯದಿಂದ ಇದ್ದಾರೆ.