ಕಲಬುರಗಿ: ಕೌಟುಂಬಿಕ ಕಲಹದ ಹಿನ್ನೆಲೆ ಮಹಿಳೆಯೊಬ್ಬರು ಭೀಮಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಲಬುರಗಿ ತಾಲೂಕಿನ ಮೈನಾಳ ಗ್ರಾಮದ ಬಳಿ ನಡೆದಿದೆ.
ಭೀಮಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ - kalaburagisuicidenews
ಕೌಟುಂಬಿಕ ಕಲಹದ ಹಿನ್ನೆಲೆ ಭೀಮಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಸ್ಥಳೀಯರು ರಕ್ಷಿಸಿದ ಘಟನೆ ಕಲಬುರಗಿ ತಾಲೂಕಿನ ಮೈನಾಳ ಗ್ರಾಮದ ಬಳಿ ನಡೆದಿದೆ.
ಭೀಮಾ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ಯತ್ನ
ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದ ವಿಜಯಲಕ್ಷ್ಮಿ ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ತಿಳಿದು ಬಂದಿದೆ. ನದಿಯ ಮಧ್ಯದಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ನೆಲೋಗಿ ಆಸ್ಪತ್ರೆಗೆ ಮಹಿಳೆಯನ್ನು ದಾಖಲಿಸಲಾಗಿದೆ. ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.