ಕಲಬುರಗಿ : ರಾಜ್ಯದಲ್ಲಿ ಕೊರೊನಾ ತಡೆಗಟ್ಟುವಲ್ಲಿ ಯಡಿಯೂರಪ್ಪನವರು ವಿಫಲರಾಗಿದ್ದು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ.
ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಲಬುರಗಿಗೆ ಆಗಮಿಸಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ವಾಟಾಳ್, ಯೂರಪ್ಪನವನವರಿಗೆ ತಲೆ ಕೆಟ್ಟಿದೆ, ಗೌರವ ಇದ್ದರೆ ಈ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ರಾಜ್ಯದಲ್ಲಿ ಕೊರೊನಾದಿಂದ ಪ್ರತಿದಿನ 150 ಜನ ಸಾಯುತ್ತಿದ್ದಾರೆ. ಆದರೆ, ಕೊರೊನಾ ನಿಯಂತ್ರಣದ ಬಗ್ಗೆ ತೆಲೆಕೆಡಿಸಿಕೊಳ್ಳದ ಯಡಿಯೂರಪ್ಪನವರ ಸರ್ಕಾರ, ಎಲ್ಲವನ್ನು ಕೈಚೆಲ್ಲಿ ಕುಳಿತಿದೆ. ಸಾಯುವವರು ಸಾಯಲಿ, ಬದುಕುವವರು ಬದುಕಲಿ, ನನ್ನ ಪಾಡಿಗೆ ನಾನಿರುತ್ತೇನೆ ಅನ್ನೋದಾದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಾಲಾ-ಕಾಲೇಜು ಆರಂಭದಲ್ಲಿ ಹುಡುಗಾಟಿಕೆ ಬೇಡ!