ಕಲಬುರಗಿ:ಕೊರೊನಾ ಸೋಂಕಿಗೆ ತುತ್ತಾಗಿದ್ದ 23 ವರ್ಷದ ಯುವತಿಯೋರ್ವಳು ಸಂಪೂರ್ಣ ಗುಣಮುಖ ಆಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.
ಕಲಬುರಗಿಯಲ್ಲಿ ಕೊರೊನಾ ಸೋಂಕಿತ ಯುವತಿ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ - Young woman release from hospital
ಕಲಬುರಗಿಯ ಯುವತಿಯೋರ್ವಳಲ್ಲಿ (ರೋಗಿ ಸಂ-302) ಕೊರೊನಾ ಸೋಂಕು ಪತ್ತೆಯಾಗಿದ್ದರಿಂದ ಇಲ್ಲಿನ ಇಎಸ್ಐಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಗುಣಮುಖರಾದ ಹಿನ್ನೆಲೆ ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.
ಜಿಲ್ಲಾಧಿಕಾರಿ ಶರತ್ ಬಿ.
ರೋಗಿ ಸಂಖ್ಯೆ-274 ಸಂಪರ್ಕಕ್ಕೆ ಬಂದಿದ್ದರಿಂದ ಏ. 7ರಂದು ಯುವತಿಯಲ್ಲಿ ಸೋಂಕು ದೃಢವಾಗಿತ್ತು. ಇದರಿಂದ ಜಿಲ್ಲೆಯಲ್ಲಿ ಇದೂವರೆಗೆ ಕೊರೊನಾ ಪಾಸಿಟಿವ್ ಪತ್ತೆಯಾದ 52 ಜನರಲ್ಲಿ ಒಟ್ಟು 8 ಜನ ರೋಗಿಗಳು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದಂತೆ 5 ಜನ ನಿಧನ ಹೊಂದಿದ್ದು, 39 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿಸಿ ಶರತ್ ಬಿ. ತಿಳಿಸಿದ್ದಾರೆ.