ಕಲಬುರಗಿ: ಅನುಮಾನಾಸ್ಪದ ರೀತಿಯಲ್ಲಿ ಯುವಕನ ಮೃತದೇಹವೊಂದು ನಗರದ ಹೊರವಲಯದ ಅಫಜಲಪುರ ರಸ್ತೆಯಲ್ಲಿ ಪತ್ತೆಯಾಗಿದೆ. ಮೃತನನ್ನು ಆಶ್ರಯ ಕಾಲೋನಿಯ ಪ್ರವೀಣಕುಮಾರ್ (23) ಎಂದು ಗುರುತಿಸಲಾಗಿದೆ.
ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆ: ಕೊಲೆ ಆರೋಪ - ಈಟಿವಿ ಭಾರತ ಕನ್ನಡ
ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವವೊಂದು ಕಲಬುರಗಿ ನಗರದ ಹೊರವಲಯದ ಅಫಜಲಪುರ ರಸ್ತೆಯಲ್ಲಿ ಪತ್ತೆಯಾಗಿದೆ.
ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆ: ಕೊಲೆಯ ಆರೋಪ
ಮೃತ ಪ್ರವೀಣ್ಕುಮಾರ್ ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕನಾಗಿ ದುಡಿಯುತ್ತಿದ್ದನು. ಈತನನ್ನು ಸ್ನೇಹಿತರಾದ ಸಾಗರ್ ಮತ್ತು ಆತನ ಸಂಗಡಿಗರು ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ :ಯಾದಗಿರಿ: ಸಿಡಿಲು ಬಡಿದು ಮೃತಪಟ್ಟವರ ಕುಟುಂಬಕ್ಕೆ ₹ 15 ಲಕ್ಷ ಪರಿಹಾರ ವಿತರಣೆ