ಕಲಬುರಗಿ: ಶರಣರ ನಾಡು ಕಲಬುರಗಿ ಈಗ ಕ್ರೈಂ ಸಿಟಿಯಾಗಿ ಬದಲಾಗುತ್ತಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ನಡೆದ ಯುವಕನ ಕೊಲೆ ಸುದ್ದಿ ಮಾಸುವ ಮುನ್ನವೇ ಇದೀಗ ಮತ್ತೊಂದು ಕೊಲೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ನಿನ್ನೆ ತಡರಾತ್ರಿ ಉದನೂರ ರಸ್ತೆಯ ಬಸಂತ ನಗರದಲ್ಲಿ ನಡೆದಿದೆ.
ಕಲಬುರಗಿಯಲ್ಲಿ ಹರಿದ ನೆತ್ತರು.. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಯುವಕನ ಬರ್ಬರ ಕೊಲೆ - youth murdered in kalaburagi
ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿಯ ಉದನೂರ ರಸ್ತೆಯ ಬಸಂತ ನಗರದಲ್ಲಿ ನಡೆದಿದೆ.
![ಕಲಬುರಗಿಯಲ್ಲಿ ಹರಿದ ನೆತ್ತರು.. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಯುವಕನ ಬರ್ಬರ ಕೊಲೆ youth murdered in kalaburagi](https://etvbharatimages.akamaized.net/etvbharat/prod-images/768-512-16567188-thumbnail-3x2-lek.jpg)
ಯುವಕನ ಬರ್ಬರ ಕೊಲೆ
ಸಂತೋಷ ಕಾಲೋನಿ ನಿವಾಸಿ ಲಕ್ಷ್ಮಿಪುತ್ರ (35) ಕೊಲೆಯಾದ ಯುವಕ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಸಂಬಂಧಿಕರೇ ಯುವಕನನ್ನು ಕೊಲೆಗೈದಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಅಶೋಕ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಶಿವಮೊಗ್ಗ: ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ.. ಕೊಲೆ ಶಂಕೆ