ಕೊಡಗು:ಜಿಲ್ಲೆಯಲ್ಲಿ ರಾತ್ರಿ 12 ಗಂಟೆಯಿಂದ ಮಾರ್ಚ್ 31ರವರೆಗೆ 144 ಸೆಕ್ಷನ್ ಜಾರಿಗೆ ಬರಲಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕೆ. ಜಾಯ್ ತಿಳಿಸಿದರು.
ದುಬೈನಿಂದ ಮರಳಿರುವ ಮತ್ತೊಬ್ಬ ವ್ಯಕ್ತಿಗೆ ಸೋಂಕಿನ ಲಕ್ಷಣಗಳಿದ್ದು, ಅವರಿಗೆ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 266 ಜನರನ್ನು ಹೋಂ ಕ್ವಾರಂಟೈನ್‌ನಲ್ಲಿ ನಿಗಾ ವಹಿಸಲಾಗಿದೆ. ಹೋಂ ಕ್ವಾರಂಟೈನ್‌ನಲ್ಲಿ ಇರುವವರು ಮನೆಯಲ್ಲೇ ಇರಬೇಕು. ಒಂದು ವೇಳೆ ಇವುಗಳನ್ನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ಡಾ. ಸುಮನ ಡಿ. ಪನ್ನೇಕರ್ ಮಾತನಾಡಿ, ಐಪಿಸಿ 144 ಉಲ್ಲಂಘಿಸಿದವರ ವಿರುದ್ಧ ಐಪಿಸಿ ಸೆಕ್ಷನ್ 188, 269, 270 ಹಾಗೂ 271 ಅಡಿ ಕಠಿಣ ಶಿಕ್ಷೆ ವಿಧಿಸಲಾಗುವುದು. ಆದ್ದರಿಂದ ನಾಗರಿಕರು ಆವೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಎಚ್ಚರಿಕೆ ನೀಡಿದರು.