ಕರ್ನಾಟಕ

karnataka

ETV Bharat / state

ಕೊಡಗಿನಲ್ಲಿ ಕ್ರೀಡಾಂಗಣ ಅಭಿವೃದ್ಧಿಗೆ 150 ಕೋಟಿ ರೂ. ಅನುದಾನ : ಸಚಿವ ನಾರಾಯಣ ಗೌಡ - ಕೊಡಗಿನಲ್ಲಿ ಕ್ರೀಡಾಂಗಣ ಅಭಿವೃದ್ಧಿಗೆ 150 ಕೋಟಿ ರೂ. ಅನುದಾನ

ಕ್ರೀಡಾ ಇಲಾಖೆ ಆಯುಕ್ತರನ್ನು ಒಳಗೊಂಡ ಸಮಿತಿ ಸದ್ಯದಲ್ಲಿಯೇ ಜಿಲ್ಲೆಗೆ ಆಗಮಿಸಲಿದ್ದು, ಜನಪ್ರತಿನಿಧಿಗಳನ್ನು ಗಮನಕ್ಕೆ ತೆಗೆದುಕೊಂಡು ಜಿಲ್ಲೆಯಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಆಗಬೇಕಾದ ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಿಶೀಲಿಸಿ ಕ್ರಮವಹಿಸಲಿದ್ದಾರೆ. ಕೋವಿಡ್ ಹಿನ್ನೆಲೆ ವಿವಿಧ ಯುವಜನ ಕಾರ್ಯಕ್ರಮಗಳು ಈ ಬಾರಿ ನಡೆದಿರುವುದಿಲ್ಲ..

Narayana Gowda
ಸಚಿವ ನಾರಾಯಣ ಗೌಡ

By

Published : Jul 2, 2021, 11:20 AM IST

ಮಡಿಕೇರಿ :ವಿರಾಜಪೇಟೆ ಕ್ರೀಡಾಂಗಣ ಮತ್ತು ಜನರಲ್ ತಿಮ್ಮಯ್ಯ ಕ್ರೀಡಾಂಗಣ ಉನ್ನತೀಕರಣಕ್ಕೆ ₹50 ಲಕ್ಷ ಹಾಗೂ ಕೂಡಿಗೆ ಕ್ರೀಡಾ ಶಾಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 1.50 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನೆ, ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ಬಳಕೆ ಮತ್ತು ಬೆಳೆ ವಿಮೆ ಪರಿಹಾರ ಕುರಿತು ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಕೋವಿಡ್-19 ಮಹಾಮಾರಿಯಿಂದಾಗಿ ಕೀಡಾ ಚಟುವಟಿಕೆಗಳು ಸ್ಥಗಿತವಾಗಿವೆ.

ಕೊಡಗಿನಲ್ಲಿ ಕ್ರೀಡಾಂಗಣ ಅಭಿವೃದ್ಧಿಗೆ 150 ಕೋಟಿ ರೂ. ಅನುದಾನ: ಸಚಿವ ನಾರಾಯಣ ಗೌಡ

ಜಿಲ್ಲೆಯ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಕ್ರೀಡೆ ಅಭಿವೃದ್ಧಿಗೆ ಶ್ರಮಿಸಲಾಗುವುದು. ಪೊನ್ನಂಪೇಟೆ ಕ್ರೀಡಾ ವಸತಿ ನಿಲಯಕ್ಕೆ ಈಗಾಗಲೇ ಖೇಲೋ ಇಂಡಿಯಾ ಘೋಷಣೆಯಾಗಿದ್ದು, ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ ಪಡಿಸಲಾಗುವುದು ಎಂದರು.

ಕ್ರೀಡಾ ಇಲಾಖೆ ಆಯುಕ್ತರನ್ನು ಒಳಗೊಂಡ ಸಮಿತಿ ಸದ್ಯದಲ್ಲಿಯೇ ಜಿಲ್ಲೆಗೆ ಆಗಮಿಸಲಿದ್ದು, ಜನಪ್ರತಿನಿಧಿಗಳನ್ನು ಗಮನಕ್ಕೆ ತೆಗೆದುಕೊಂಡು ಜಿಲ್ಲೆಯಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಆಗಬೇಕಾದ ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಿಶೀಲಿಸಿ ಕ್ರಮವಹಿಸಲಿದ್ದಾರೆ. ಕೋವಿಡ್ ಹಿನ್ನೆಲೆ ವಿವಿಧ ಯುವಜನ ಕಾರ್ಯಕ್ರಮಗಳು ಈ ಬಾರಿ ನಡೆದಿರುವುದಿಲ್ಲ.

ಅವುಗಳ ಅನುದಾನವನ್ನು ಬದಲಾವಣೆ ಮಾಡಿಕೊಂಡು ಕ್ರೀಡಾಂಗಣದ ಕೆಲವು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು. ಬಳಿಕ ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಕೊಠಡಿಗಳನ್ನು ಪರಿಶೀಲಿಸಿದರು.

ಇದನ್ನೂ ಓದಿ:"ಮಾಹಿ ಎಲ್ಲರ ಹೀರೋ".. ಇದು ಧೋನಿ ಹುಟ್ಟುಹಬ್ಬಕ್ಕೆ ಕಾಮನ್​ ಡಿಪಿ ಬಿಡುಗಡೆ ಮಾಡಿದ ಕಿಚ್ಚನ ನುಡಿ

ABOUT THE AUTHOR

...view details