ಮಡಿಕೇರಿ: ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯತ್‍ಗಳಲ್ಲಿ ‘ಕೊರೊನಾ ಮುಕ್ತ ಗ್ರಾಮ’ ಮಾಡುವ ಗ್ರಾ.ಪಂ.ಗೆ ಶಾಸಕರ ನಿಧಿಯಡಿ 5 ಲಕ್ಷ ರೂ ನೀಡಲಾಗುವುದು ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.
ನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಕೋವಿಡ್ 19 ಸೋಂಕಿತರಿಗೆ ಹಣ್ಣು ಹಂಪಲು ವಿತರಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣಗಳು ಕಡಿಮೆಯಾಗುತ್ತಿದೆ. ಜೊತೆಗೆ ಸಾವಿನ ಪ್ರಮಾಣವು ಇಳಿಮುಖವಾಗುತ್ತಿದೆ. ಆದರೆ, ಇಷ್ಟಕ್ಕೆ ಸಮಾಧಾನ ಪಡದೇ ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.