ಕರ್ನಾಟಕ

karnataka

ETV Bharat / state

ಕೊಡಗಿನಲ್ಲಿ ಮತ್ತೆ 6 ಕೊರೊನಾ ಪ್ರಕರಣಗಳು ಪತ್ತೆ - corona news

ಕೊಡಗಿನಲ್ಲಿಂದು ಆರು ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ.

ಕೊರೊನಾ
ಕೊರೊನಾ

By

Published : Jun 26, 2020, 5:01 PM IST

ಕೊಡಗು: ಜಿಲ್ಲೆಯಲ್ಲಿ ಮತ್ತೆ 6 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 36ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 33 ಸಕ್ರಿಯ ಪ್ರಕರಣಗಳಿವೆ.‌

ಬೆಂಗಳೂರಿನ ಪ್ರಯಾಣದ ಇತಿಹಾಸ ಹೊಂದಿರುವ ಗಂಡ, ಹೆಂಡತಿ ಮತ್ತು ಎರಡು ವರ್ಷ ವಯಸ್ಸಿನ ಮಗುವಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಇವರು ವಿರಾಜಪೇಟೆ ತಾಲೂಕಿನ ಹುಂಡಿ ಮತ್ತು ಸೋಮವಾರಪೇಟೆ ತಾಲೂಕಿನ ನೆಲ್ಯಹುದಿಕೇರಿ ಗ್ರಾಮದಲ್ಲಿ ವಾಸ ಮಾಡಿದ್ದರು. ಹಾಗೆಯೇ ಪುಣೆಯಿಂದ ಜಿಲ್ಲೆಗೆ ಹಿಂತಿರುಗಿರುವ 24 ವರ್ಷದ ವ್ಯಕ್ತಿಯೊಬ್ಬರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ. ಇವರು ಸೋಮವಾರಪೇಟೆ ತಾಲೂಕು ಶನಿವಾರಸಂತೆ ನಿವಾಸಿಯಾಗಿದ್ದಾರೆ.

ಕೊರೊನಾ ಸೋಂಕಿತರ ಮಾಹಿತಿ

ವಿರಾಜಪೇಟೆ ತಾಲೂಕು ಕೊಂಡಂಗೇರಿ ಗ್ರಾಮದ 23 ವರ್ಷದ ವ್ಯಕ್ತಿಯೊಬ್ಬರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಇವರು ವಿದೇಶದಿಂದ (ಶಾರ್ಜಾ) ಮರಳಿರುತ್ತಾರೆ. ಅಲ್ಲದೆ ಮತ್ತೋರ್ವ ರೋಗಿ‌ ಸೋಮವಾರಪೇಟೆ ತಾಲೂಕಿನ ಕುಶಾಲನಗರ ಹೋಬಳಿಯ ಹುಲುಸೆ ಗ್ರಾಮದ (46) ವರ್ಷದ ವ್ಯಕ್ತಿಯೊಬ್ಬರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಇವರಿಗೆ ಬೆಂಗಳೂರಿನ ಪ್ರಯಾಣದ ಇತಿಹಾಸವಿದೆ.‌ ಎಲ್ಲಾ ಸೋಂಕಿತರನ್ನು ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಜಿಲ್ಲೆಯಲ್ಲಿ ಹೊಸದಾಗಿ ಹುಂಡಿ, ನೆಲ್ಲಿಹುದಿಕೇರಿ ಮತ್ತು ಹುಲುಸೆ ಗ್ರಾಮದಲ್ಲಿ ನಿಯಂತ್ರಿತ ಪ್ರದೇಶಗಳನ್ನು ಮಾಡಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 36 ಕೋವಿಡ್-19 ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 03 ಜನ ಗುಣಮುಖರಾಗಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು 18 ನಿಯಂತ್ರಿತ ಪ್ರದೇಶಗಳಿವೆ ಎಂದು ಜಿಲ್ಲಾಡಳಿತ ತಿಳಿಸಿದೆ.‌

ABOUT THE AUTHOR

...view details