ಕೊಡಗು:ಜಿಲ್ಲೆಯಲ್ಲಿ ಕೊರೊನಾಗೆ ವೃದ್ಧೆ ಮಹಿಳೆ ಮೃತಪಟ್ಟಿದ್ದು, ಸೋಂಕಿನಿಂದ ಇದುವರೆಗೆ ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ಕೊಡಗಿನಲ್ಲಿ ಕೊರೊನಾ ಸೋಂಕಿಗೆ ವೃದ್ಧೆ ಸಾವು - Kodagu corona latest news
ಕೊಡಗು ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ವೃದ್ಧೆಯೋರ್ವರು ಮೃತಪಟ್ಟಿದ್ದಾರೆ.
Kodagu
ಕುಶಾಲನಗರ ಸಮೀಪದ ಬೈಚನಹಳ್ಳಿಯ 60 ವರ್ಷದ ವೃದ್ಧೆ ಸೋಂಕಿನಿಂದ ಮೃತಪಟ್ಟಿದ್ದು, ಇವರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು.
ಆ.27 ರಂದು ವೃದ್ಧೆಯೂ ತೀವ್ರ ಅಸ್ವಸ್ಥಗೊಂಡಿದ್ದು, ಕುಶಾಲನಗರದ ಖಾಸಗಿ ಕ್ಲಿನಿಕ್‌ನಲ್ಲಿ ಚಿಕಿತ್ಸೆ ಪಡೆದಿದ್ದರು. ಇವರ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಹಾಗೆಯೇ ನಿನ್ನೆ ಮತ್ತೆ ತೀವ್ರ ಸುಸ್ತು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.