ಕೊಡಗು: ಜಿಲ್ಲೆಯಲ್ಲಿ ವೇಗವಾಗಿ ಹೆಚ್ಚುತ್ತಿರುವ ಕೊರೊನಾ ಪೀಡಿತರಲ್ಲಿ ಶೇ.82ರಷ್ಟು ರೋಗಿಗಳಿಗೆ ರೋಗ ಲಕ್ಷಣಗಳೇ ಇಲ್ಲ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹೇಳಿದ್ದಾರೆ.
ಶೇ.82ರಷ್ಟು ರೋಗಿಗಳಿಗೆ ರೋಗದ ಲಕ್ಷಣಗಳಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ - The corona virus update
ಸೋಂಕು ಹರಡುತ್ತಿರುವುದನ್ನು ನಿಯಂತ್ರಿಸಲು ವ್ಯಾಪಕವಾಗಿ ಪರೀಕ್ಷೆ ನಡೆಸಲಾಗುತ್ತಿದೆ. ಆದರೆ, ಶೇ.82ರಷ್ಟು ಜನರಿಗೆ ಸೋಂಕಿನ ಲಕ್ಷಣಗಳಿಲ್ಲ ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹೇಳಿದ್ದಾರೆ.
ಸೋಂಕು ಹರಡುತ್ತಿರುವುದನ್ನು ನಿಯಂತ್ರಿಸಲು ವ್ಯಾಪಕವಾಗಿ ಪರೀಕ್ಷೆ ನಡೆಸಲಾಗುತ್ತಿದೆ. ಆದರೆ ಬಹುತೇಕ ಜನರಿಗೆ ಸೋಂಕಿನ ಲಕ್ಷಣಗಳಿಲ್ಲ ಎಂದು ಅವರು ಹೇಳಿದ್ದಾರೆ.
ಇಂತಹ ಜನರಿಗೆ ಅವರ ಮನೆಯಲ್ಲೇ ಉಳಿದುಕೊಳ್ಳಲು ವ್ಯವಸ್ಥೆ ಇದೆ. ಮನೆಯವರು ಒಪ್ಪಿದರೆ, ಮನೆಯಲ್ಲೇ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದು ವೇಳೆ ಮನೆಯಲ್ಲಿ ಅಂತಹ ವ್ಯವಸ್ಥೆ ಇರದೆ, ಮನೆಯವರು ಕೂಡ ಒಪ್ಪದಿದ್ದರೆ ಕೋವಿಡ್ ಕೇರ್ ಸೆಂಟರ್ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ರೋಗ ಲಕ್ಷಣಗಳಿದ್ದರೆ, ಅಂತಹವರಿಗೆ ಕೊವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.