ಮಡಿಕೇರಿ(ಕೊಡಗು):ಸಂಸದ ತೇಜಸ್ವಿ ಸೂರ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪದಡಿ ಯುವಕನೊಬ್ಬನನ್ನು ವಿರಾಜಪೇಟೆ ಪೊಲೀಸರು ಬಂಧಿಸಿದ್ದಾರೆ.
ಸಾಮಾಜಿಕ ತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಆರೋಪ: ಕೊಡಗಿನಲ್ಲಿ ಯುವಕ ಅರೆಸ್ಟ್ - social site
ವಿರಾಜಪೇಟೆಯ ಯುವಕ ತನ್ನ ಫೇಸ್ಬುಕ್ ಫೇಜ್‌ನಲ್ಲಿ ಸಂಸದ ತೇಜಸ್ವಿ ಸೂರ್ಯ ಹಾಗೂ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಸಾರ್ವಜನಿಕರು ನೀಡಿದ ದೂರಿನ ಹಿನ್ನೆಲೆ ಯುವಕನನ್ನು ಪೊಲೀಸರು ಬಂಧಿಸಲಾಗಿದೆ.
ಸಾಮಾಜಿಕ ತಾಣದಲ್ಲಿ ಅವಹೇಳನಕಾರಿ ಪೋಸ್ಟ್
ವಿರಾಜಪೇಟೆಯ ನಿವಾಸಿ ನಾಸಿರ್ ಎಂಬಾತ ತನ್ನ ಫೇಸ್ಬುಕ್ ಫೇಜ್‌ನಲ್ಲಿ ಸಂಸದ ತೇಜಸ್ವಿ ಸೂರ್ಯ ಹಾಗೂ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ವಿರಾಜಪೇಟೆಯ ವಿವೇಕ್ ರೈ ಎಂಬುವರು ಪೊಲೀಸರಿಗೆ ದೂರು ನೀಡಿದ್ದರು. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಸೈಬರ್ ಕ್ರೈಂ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.