ಕರ್ನಾಟಕ

karnataka

ETV Bharat / state

ಕೊಡಗಿನಲ್ಲಿ ಒಂಟಿ ಮಹಿಳೆ ಕೊಲೆ ಪ್ರಕರಣ: ತನಿಖೆ ತೀವ್ರಗೊಳಿಸಿದ ಪೊಲೀಸರು - ಕೊಡಗು ಅಪರಾಧ ಸುದ್ದಿ

ಕೊಡಗಿನ ಕಳಕೇರಿ ನಿಡುಗಣೆ ಗ್ರಾಮದಲ್ಲಿ ಒಂದು ತಿಂಗಳ ಹಿಂದೆ ನಡೆದ ಒಂಟಿ ಮಹಿಳೆಯ ಹತ್ಯೆ ಮತ್ತು ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಓರ್ವನನ್ನು ಬಂಧಿಸಿದ್ದಾರೆ.

kodagu
ಕೊಡಗಿನ ಒಂಟಿ ಮಹಿಳೆ ಕೊಲೆ ಪ್ರಕರಣ

By

Published : Mar 23, 2021, 11:05 AM IST

Updated : Mar 23, 2021, 11:45 AM IST

ಕೊಡಗು:ಮಡಿಕೇರಿ ಹೊರವಲಯದ ಕಳಕೇರಿ ನಿಡುಗಣೆ ಗ್ರಾಮದಲ್ಲಿ ಒಂದು ತಿಂಗಳ ಹಿಂದೆ ನಡೆದ ಒಂಟಿ ಮಹಿಳೆಯ ಹತ್ಯೆ ಮತ್ತು ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಓರ್ವನನ್ನು ವಿಚಾರಣೆಗೊಳಪಡಿಸಿರುವ ಬಗ್ಗೆ ತಿಳಿದು ಬಂದಿದೆ. ಈತ ನಗರದ ಹೊರ ವಲಯದ ರೆಸಾರ್ಟ್‍ವೊಂದರಲ್ಲಿ ಕೆಲಸಕ್ಕಿದ್ದ ಎಂದು ಹೇಳಲಾಗಿದೆ.

ಕೊಡಗಿನ ಒಂಟಿ ಮಹಿಳೆ ಕೊಲೆ ಪ್ರಕರಣ

ಮಾಜಿ ಯೋಧ ದಿ.ಬೈಲಾಡಿ ಹೊನ್ನಪ್ಪ ಅವರ ಪತ್ನಿ ಲಲಿತ(70) ಎಂಬುವವರು ಹತ್ಯೆಗೊಳಗಾದ ಮಹಿಳೆ. ಮನೆಯಲ್ಲಿಟ್ಟಿದ್ದ 50 ಸಾವಿರ ರೂ. ನಗದು, 2.50 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕೊಲೆಯ ನಂತರ ಕಳವು ಮಾಡಲಾಗಿತ್ತು. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನು ಓದಿ: ಸಹಪಾಠಿಗಳ ನಿಂದನೆ: ಮನನೊಂದು 10 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಕೃತ್ಯದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ. ಶೀಘ್ರವೇ ಆರೋಪಿಗಳ ಬಗ್ಗೆ ಅಧಿಕೃತ ಮಾಹಿತಿ ಹೊರ ಬೀಳಲಿದೆ ಎಂದು ಹೇಳಲಾಗಿದೆ.

Last Updated : Mar 23, 2021, 11:45 AM IST

ABOUT THE AUTHOR

...view details