ಸೋಮವಾರಪೇಟೆ/ಕೊಡಗು:ಮರದಿಂದ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲೂಕಿನ ತಣ್ಣೀರು ಹಳ್ಳ ಗ್ರಾಮದಲ್ಲಿ ನಡೆದಿದೆ.
ಮರದಿಂದ ಜಾರಿ ಕಾರ್ಮಿಕ ಸಾವು..! - ಕೊಡಗು ವ್ಯಕ್ತಿ ಸಾವು,
ಕಪಾತು ಮಾಡುತ್ತಿದ್ದ ಕಾರ್ಮಿಕನೊಬ್ಬ ಮರದ ಮೇಲಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.
ಸೋಮವಾರಪೇಟೆ ತಾಲೂಕಿನ ತಣ್ಣೀರು ಹಳ್ಳದ ನಿವಾಸಿ ಗಣೇಶ್(48) ಮೃತ ಕಾರ್ಮಿಕ. ಮಧ್ಯಾಹ್ನ ಅಬ್ಬೂರುಕಟ್ಟೆಯಲ್ಲಿ ಶಾಂತಕುಮಾರ್ ಎಂಬುವರ ಕಾಫಿ ತೋಟದಲ್ಲಿ ಮರ ಕಪಾತು ಮಾಡುತ್ತಿದ್ದಾಗ ಆಯಾತಪ್ಪಿ ಬಿದ್ದು ದುರ್ಘಟನೆ ಸಂಭವಿಸಿದೆ.
ಈ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.