ಕೊಡಗು:ಕುಡಿಯಲು ಹಣ ಕೊಡದಿದ್ದಕ್ಕೆ ಸ್ವಂತ ಮಗ ತಂದೆಯನ್ನೇ ಕೊಲೆ ಮಾಡಿರುವ ಅಮಾನವೀಯ ಘಟನೆ ಸೋಮವಾರಪೇಟೆ ತಾಲೂಕಿನ ಗೋಣಿಮರೂರು ಗ್ರಾಮದಲ್ಲಿ ನಡೆದಿದೆ.
ಮದ್ಯ ಸೇವನೆಗೆ ದುಡ್ಡು ಕೊಡಲಿಲ್ಲ ಎಂದು ತಂದೆಯನ್ನೇ ಕೊಂದ ಪುತ್ರ! - Kodagu crime news
ಮದ್ಯ ಸೇವಿಸಲು ಹಣ ನೀಡಲಿಲ್ಲ ಎಂದು ಕುಪಿತಗೊಂಡ ಮಗ, ತಂದೆಯನ್ನು ಹತ್ಯೆಗೈದಿರುವ ಘಟನೆ ಸೋಮವಾರಪೇಟೆ ತಾಲೂಕಿನ ಗೋಣಿಮರೂರು ಗ್ರಾಮದಲ್ಲಿ ನಡೆದಿದೆ
ಕೊಲೆ
ಗೋಣಿಮರೂರು ಗ್ರಾಮದ ಜೇನುಕುರುಬರ ಕರಿಯಪ್ಪ (46) ಎಂಬವರು ಮಗ ಲೋಕೇಶ್‌ನಿಂದ ಹತ್ಯೆಯಾಗಿದ್ದಾರೆ. ಘಟನೆಯಲ್ಲಿ ತಾಯಿ ಲೀಲಾ ಎಂಬವರಿಗೂ ಗಂಭೀರ ಸ್ವರೂಪದ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಡಿಯಲು ಹಣ ಕೊಡದಿದ್ದಕ್ಕೆ ಈ ಕೃತ್ಯ ನಡೆದಿದೆ ಎಂಬ ವಿಚಾರ ಪ್ರಾಥಮಿಕ ತನಿಖೆಯಂದ ಗೊತ್ತಾಗಿದೆ. ಇನ್ನು ಆರೋಪಿ ಲೋಕೇಶ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.