ಕೊಡಗು: ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿರಾಜಪೇಟೆ ತಾಲೂಕಿನ ಹರಿಹರ ಗ್ರಾಮದಲ್ಲಿ ನಡೆದಿದೆ.
ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.. - suicide in kodagu
ವಿರಾಜಪೇಟೆ ತಾಲೂಕಿನ ಹರಿಹರ ಗ್ರಾಮದ ವಿದ್ಯಾರ್ಥಿನಿಯೋರ್ವಳು ನಿನ್ನೆ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ
ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ ಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮೇಘನಾ(20)ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ನಿನ್ನೆ ತಡರಾತ್ರಿ ಮನೆಯಲ್ಲಿ ವಿಷ ಸೇವಿಸಿದ್ದ ಈಕೆಯನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಕಾರಣ ಆಸ್ಪತ್ರೆಯಲ್ಲೇ ಮೇಘನಾ ಮೃತಪಟ್ಟಿದ್ದಾರೆ.ಈ ಸಂಬಂಧ ಗೋಣಿಕೊಪ್ಪಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ.