ಕೊಡಗು:ಜಿಲ್ಲೆಯ ವಿರಾಜಪೇಟೆಯ ಎರಡು ಬೆಟ್ಟಗಳಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಕಪೀಲ್ ಸಿಂಗ್ ಮತ್ತು ಸುನಂದ ಬಸು ವಿಜ್ಞಾನಿಗಳ ತಂಡ ಭೇಟಿ ನೀಡಿ ಪರಿಶೀಲಿಸಿದೆ.
ಕೊಡಗಿನ ಬೆಟ್ಟದಲ್ಲಿ ಬಿರುಕು: ವಿಜ್ಞಾನಿಗಳ ತಂಡ ಭೇಟಿ, ಪರಿಶೀಲನೆ - ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್
ನಿರಂತರ ಮಳೆಯಿಂದ ವಿರಾಜಪೇಟೆ ಪಟ್ಟಣದ ಅಯ್ಯಪ್ಪ ಬೆಟ್ಟ ಹಾಗೂ ನೆಹರು ನಗರಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ನೇತೃತ್ವದಲ್ಲಿ ಭೂ ವಿಜ್ಞಾನಿಗಳ ತಂಡ ಭೇಟಿ ನೀಡಿ ಮಣ್ಣು ಪರೀಕ್ಷೆ ನಡೆಸಿದೆ.
ವಿಜ್ಞಾನಿಗಳ ತಂಡ
ನಿರಂತರ ಮಳೆಯಿಂದ ವಿರಾಜಪೇಟೆ ಪಟ್ಟಣದ ಅಯ್ಯಪ್ಪ ಬೆಟ್ಟ ಹಾಗೂ ನೆಹರು ನಗರಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ನೇತೃತ್ವದಲ್ಲಿ ಭೂ ವಿಜ್ಞಾನಿಗಳ ತಂಡ ಭೇಟಿ ನೀಡಿ ಮಣ್ಣು ಪರೀಕ್ಷೆ ನಡೆಸಿದೆ.
ಮಳೆಗಾಲದಲ್ಲಿ ಬೆಟ್ಟ ಕುಸಿಯುವ ಸಾಧ್ಯತೆ ಇರುವುದಾಗಿ ವಿಜ್ಞಾನಿಗಳ ತಂಡ ಎಚ್ಚರಿಸಿರುವ ಹಿನ್ನೆಲೆ ಆಗಸ್ಟ್ 31ರವರೆಗೆ ಅಲ್ಲಿನ 54 ಕುಟುಂಬಗಳನ್ನು ಪರಿಹಾರ ಕೇಂದ್ರದಲ್ಲಿ ಇರಿಸುವುದಾಗಿ ಕೊಡಗು ಡಿಸಿ ತಿಳಿಸಿದ್ದಾರೆ.