ಕೊಡಗು: ಕೊರೊನಾ ಸೋಂಕಿಗೆ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕೊಡಗಿನಲ್ಲಿ ಮತ್ತೋರ್ವ ಮಹಿಳೆ ಮೃತಪಟ್ಟಿದ್ದಾರೆ.
ಕೊಡಗಿನಲ್ಲಿ ಕೊರೊನಾಗೆ ಮತ್ತೊಂದು ಬಲಿ: ಎರಡಕ್ಕೇರಿದ ಸಾವಿನ ಸಂಖ್ಯೆ - A woman died in kodagu due to covid 19
ಕೊಡಗಿನ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲು ಪಟ್ಟಣದ ಅಚ್ಚಪ್ಪ ಲೇಔಟ್‌ನ ಮಹಿಳೆ ಕೊರೊನಾಗೆ ಬಲಿಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಎರಡು ತಲುಪಿದೆ.
Corona
ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲು ಪಟ್ಟಣದ ಅಚ್ಚಪ್ಪ ಲೇಔಟ್‌ನ 86 ವರ್ಷದ ಮಹಿಳೆ ಕೊರೊನಾಗೆ ಬಲಿಯಾಗಿದ್ದಾರೆ. ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಜುಲೈ 6 ರಂದು ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 7 ರಂದು ಮಹಿಳೆಗೆ ಸೋಂಕು ದೃಢಪಟ್ಟಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯನ್ನು ವೆಂಟಿಲೇಟರ್‌ನಲ್ಲಿಟ್ಟು ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ತಡರಾತ್ರಿ 10:45ಕ್ಕೆ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.