ಮಡಿಕೇರಿ(ಕೊಡಗು): ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಹೇಯ ಕೃತ್ಯ ಎಸಗುತ್ತಿದ್ದ ವ್ಯಕ್ತಿಯನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕುಶಾಲನಗರ ತಾಲೂಕು ಸುಂಟಿಕೊಪ್ಪ ಸಮೀಪದ ಅಂದಗೋವೆಯಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಈ ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ.
ಪೊಲೀಸರು ಆರೋಪಿ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡು ನ್ಯಾಯಾಂಗ ಬ೦ಧನಕ್ಕೆ ಒಳಪಡಿಸಿದ್ದಾರೆ. ಸುಂಟಿಕೊಪ್ಪ ಪಂಪ್ ಹೌಸ್ ನಿವಾಸಿ ಬಂಧಿತ ಆರೋಪಿ.
ಪೊಲೀಸ್ ಮಾಹಿತಿ ಪ್ರಕಾರ, ಸುಂಟಿಕೊಪ್ಪ ಸಮೀಪದ ಅಂದಗೋವೆ ಗ್ರಾಮದ ಸಿ.ಎ. ದೇವಯ್ಯ ಎಂಬುವರು ತಮ್ಮ ಹಸುವನ್ನು ಕಟ್ಟಿಹಾಕಿ ಮೇಯಲು ಬಿಟ್ಟು ಸಂತೆಗೆ ಹೋಗಿದ್ದರು. ದೇವಯ್ಯ ಅವರು ಸಂತೆ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ಆರೋಪಿಯ ಮೋಟಾರ್ ಬೈಕ್ ಗದ್ದೆ ದಾರಿಯಲ್ಲಿ ನಿಂತಿದ್ದನ್ನು ಗಮನಿಸಿದ್ದಾರೆ. ಆಗ ಅನುಮಾನದಿಂದ ದೇವಯ್ಯ ತಕ್ಷಣ ಮೇಯಲು ಬಿಟ್ಟಿದ್ದ ಹಸುವನ್ನು ಕೊಟ್ಟಿಗೆಗೆ ತರಲು ಹೋದಾಗ ಆರೋಪಿಯೂ ಹಸುವಿನ ಮೇಲೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದನಂತೆ.
ಇದನ್ನು ವಿರೋಧಿಸಿದ ದೇವಯ್ಯ ಹಾಗೂ ಸ್ಥಳೀಯರು ಸೇರಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 377 ಮೊಕದ್ದಮೆ ದಾಖಲಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ:ಸ್ನೇಹಿತರಿಗೆ ಇಲ್ಲದ ಚಿಕನ್ ಊಟ, ಮದುವೆಯನ್ನೇ ನಿಲ್ಲಿಸಿದ ವರ!