ಕೊಡಗು:ಕೊರೊನಾ ವೈರಸ್ ತಡೆಗೆ ರಾಜ್ಯ ಸರ್ಕಾರ ಆದೇಶಿಸಿರುವ ಲಾಕ್ಡೌನ್ ಅನ್ನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನಾ ಡಿ.ಪನ್ನೇಕರ್ ಎಚ್ವರಿಸಿದ್ದಾರೆ.
ಲಾಕ್ಡೌನ್ ಉಲ್ಲಂಘಿಸಿದರೆ ಶಿಸ್ತು ಕ್ರಮ: ಕೊಡಗು ಎಸ್ಪಿ ಎಚ್ಚರಿಕೆ
ಯಾವುದೇ ಜಾತ್ರೆ, ಸಾಮೂಹಿಕ ಹಬ್ಬ ಆಚರಿಸದಂತೆ ಸೂಚನೆ ನೀಡಲಾಗಿದೆ. ಎಲ್ಲ ಧಾರ್ಮಿಕ ಕಾರ್ಯಕ್ರಮ ನಿಷೇಧಿಸಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ.
ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನಾ ಡಿ.ಪನ್ನೇಕರ್
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ 13 ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ. ಚೆಕ್ ಪೋಸ್ಟ್ ಮೂಲಕ ಎಲ್ಲ ವಾಹನ ಸಂಚಾರ ಬಂದ್ ಮಾಡಿದ್ದೇವೆ. ನಾಳೆಗೆ ವಾಹನ ಸಂಚಾರ ನಿಯಂತ್ರಣಕ್ಕೆ ಬರಲಿದೆ ಎಂದರು.
ಹೋಮ್ ಕ್ವಾರಂಟೈನ್ ಉಲ್ಲಂಘಿಸಿದರೆ ಅಂತಹವರನ್ನು ಸಾರ್ವಜನಿಕ ಹೋಮ್ ಕ್ವಾರಂಟೈನ್‌ಗೆ ಸ್ಥಳಾಂತರಿಸಲಾಗುವುದು. ಇನ್ನು ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ದೃಷ್ಟಿಯಿಂದ ಜಿಲ್ಲಾಡಳಿತ ಮಾ.31ರವರೆಗೆ ಮಸೀದಿ, ಚರ್ಚ್ ಮತ್ತು ದೇವಾಲಯಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿಷೇಧಿಸಲಾಗಿದೆ ಎಂದು ಹೇಳಿದರು.