ಕರ್ನಾಟಕ

karnataka

ETV Bharat / state

ಮಧ್ಯಾಹ್ನದ ಬಳಿಕ ಕೊಡಗಿನಲ್ಲಿ ವ್ಯಾಪಾರ-ವಹಿವಾಟು ಬಂದ್​.. ಚೇಂಬರ್ ಆಫ್ ಕಾಮರ್ಸ್ ನಿರ್ಧಾರ - kodagu corona update

ಜಿಲ್ಲೆಯಲ್ಲಿ ವ್ಯಾಪಾರ-ವಹಿವಾಟು ಮುಂದುವರೆದ್ರೆ ಮತ್ತಷ್ಟು ಸಮಸ್ಯೆ ಉಂಟಾಗಬಹುದೆಂಬ ಉದ್ದೇಶದಿಂದ ಶಾಸಕ ಎಂ ಪಿ ಅಪ್ಪಚ್ಚು ರಂಜನ್, ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ ಮತ್ತು ಸುನಿಲ್ ಸುಬ್ರಹ್ಮಣಿ ನೇತೃತ್ವದಲ್ಲಿ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಸಮಿತಿ ಸಭೆ ನಡೆಸಲಾಯಿತು..

Afternoon trade market  band in Kodagu
ಕೊಡಗಿನಲ್ಲಿ ಮಧ್ಯಾಹ್ನದ ಬಳಿಕ ವ್ಯಾಪಾರ-ವಹಿವಾಟು ಬಂದ್​..ಛೇಂಬರ್ ಆಫ್ ಕಾಮರ್ಸ್ ನಿರ್ಧಾರ

By

Published : Jun 26, 2020, 6:48 PM IST

ಕೊಡಗು :ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಎಚ್ಚೆತ್ತ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅರ್ಧ ದಿನ ಮಾತ್ರ ವ್ಯಾಪಾರ-ವಹಿವಾಟು ನಡೆಸಿ, ಮಧ್ಯಾಹ್ನ ಎರಡು ಗಂಟೆ ಬಳಿಕ ಸಂಪೂರ್ಣ ಬಂದ್‍ ಮಾಡಲು ನಿರ್ಧರಿಸಿದೆ.

ಜಿಲ್ಲಾಸ್ಪತ್ರೆಯ ಜನರಲ್ ವಾರ್ಡ್‍ಗಳಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರು ಮತ್ತು ಖಾಸಗಿ ಕ್ಲಿನಿಕ್​ಗಳ ಸಿಬ್ಬಂದಿ ಸೇರಿ 30 ಜನರಿಗೆ ಕೊರೊನಾ ದೃಢಪಟ್ಟಿದೆ. ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿಸಿದೆ. ಅಲ್ಲದೆ, ಇಬ್ಬರು ಸೋಂಕಿತರಿಗೆ ಟ್ರಾವಲ್ ಹಿಸ್ಟರಿ ಇಲ್ಲದಿದ್ದರೂ ಸೋಂಕು ತಗುಲಿದೆ.

ಹೀಗಾಗಿ ಜಿಲ್ಲೆಯಲ್ಲಿ ವ್ಯಾಪಾರ-ವಹಿವಾಟು ಮುಂದುವರೆದ್ರೆ ಮತ್ತಷ್ಟು ಸಮಸ್ಯೆ ಉಂಟಾಗಬಹುದೆಂಬ ಉದ್ದೇಶದಿಂದ ಶಾಸಕ ಎಂ ಪಿ ಅಪ್ಪಚ್ಚು ರಂಜನ್, ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ ಮತ್ತು ಸುನಿಲ್ ಸುಬ್ರಹ್ಮಣಿ ನೇತೃತ್ವದಲ್ಲಿ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಸಮಿತಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಜಿಲ್ಲೆಯಲ್ಲಿ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ವ್ಯಾಪಾರ-ವಹಿವಾಟು ನಡೆಸಲು ನಿರ್ಧರಿಸಲಾಗಿದೆ.

ಇನ್ನು, ಮಡಿಕೇರಿ ಶಾಸಕ ಎಂ ಪಿ ಅಪ್ಪಚ್ಚು ರಂಜನ್ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸಬೇಕಾದರೆ ಸಂಪೂರ್ಣ ಲಾಕ್‍ಡೌನ್ ಮಾಡುವುದು ಅನಿವಾರ್ಯ ಎನ್ನುತ್ತಿದ್ದಾರೆ. ಈಗಾಗಲೇ ಹೋಂ ಸ್ಟೇ, ರೆಸಾರ್ಟ್​, ಹೋಟೆಲ್​ಗಳನ್ನ ಬಂದ್ ಮಾಡಲಾಗಿದೆ.

ABOUT THE AUTHOR

...view details