ಕೊಡಗು: ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಹಿರಿಯ ರಾಜಕೀಯ ಧುರೀಣ ಎ.ಕೆ.ಸುಬ್ಬಯ್ಯ ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದೆ.
ಕೊಡಗಿನ ರಾಜಕೀಯ ಧುರೀಣ ಎ.ಕೆ.ಸುಬ್ಬಯ್ಯ ಆರೋಗ್ಯ ಸ್ಥಿತಿ ಗಂಭೀರ - ಹಿರಿಯ ರಾಜಕೀಯ ಧುರೀಣ ಎ.ಕೆ.ಸುಬ್ಬಯ್ಯ
ಹಿರಿಯ ರಾಜಕೀಯ ನಾಯಕ ಎ.ಕೆ.ಸುಬ್ಬಯ್ಯ ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಎ.ಕೆ.ಸುಬ್ಬಯ್ಯ
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಹರಿಹರ ಗ್ರಾಮದ ಎ.ಕೆ.ಸುಬ್ಬಯ್ಯ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಆರೋಗ್ಯದಲ್ಲಿ ಮಾತ್ರ ಚೇತರಿಕೆ ಕಾಣದಂತಾಗಿದೆ.
ನಾಲ್ಕು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದ ಸುಬ್ಬಯ್ಯ, ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ ಅವರ ಒಡನಾಡಿ ಆಗಿದ್ದರು.1975 ರ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ 19 ತಿಂಗಳು ಜೈಲು ವಾಸವನ್ನೂ ಅನುಭವಿಸಿದ್ದರು. ವಿಧಾನ ಪರಿಷತ್ ಸದಸ್ಯರಾಗಿ ಹಾಗೂ ಪ್ರಖರ ವಾಗ್ಮಿಯೂ ಆಗಿದ್ದರು.