ಕರ್ನಾಟಕ

karnataka

ETV Bharat / state

ಪೊನ್ನಂಪೇಟೆ ಶಾಲೆಯಲ್ಲಿ ಶಸ್ತ್ರಾಸ್ತ್ರ ತರಬೇತಿ: ಪೊಲೀಸರಿಗೆ ಪಿಎಫ್‌ಐ ದೂರು - ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಕಾರ್ಯಕರ್ತರಿಂದ ದೂರು

ಪೊನ್ನಂಪೇಟೆ ತಾಲೂಕಿನ ಸಾಯಿ ಶಂಕರ ಶಾಲೆಯಲ್ಲಿ ಹಿಂದೂ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಿರುವುದು ಬೆಳಕಿಗೆ ಬಂದಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಒಟ್ಟು 6 ಜನರ ಮೇಲೆ ಪಿಎಫ್‌ಐ ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ.

Arms training  for Hindu students at Kodagu
ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಕಾರ್ಯಕರ್ತರಿಂದ ದೂರು

By

Published : May 17, 2022, 8:44 AM IST

ಕೊಡಗು:ಶೌರ್ಯ ಪ್ರಶಿಕ್ಷಣ ವರ್ಗ ಹೆಸರಿನಲ್ಲಿ ಹಿಂದೂ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಿರುವುದನ್ನು ವಿರೋಧಿಸಿ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಸಂಘಟನೆಯ ಕಾರ್ಯಕರ್ತರು ಪೊನ್ನಂಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಕೃಷ್ಣಮೂರ್ತಿ, ವಿರಾಜಪೇಟೆ ಶಾಸಕ ಕೆ.ಜಿ.ಬೋಪ್ಪಯ್ಯ, ಸೋಮವಾರಪೇಟೆ ಶಾಸಕ ಅಪ್ಪಚ್ಚು ರಂಜನ್, ಎಂಎಲ್​​ಸಿ ಸುಜಾ ಕುಶಾಲಪ್ಪ, ರಘು ಸಕಲೇಶಪುರ ಗಣಪತಿ ಹಾಗೂ ಸಾಯಿ ಶಂಕರ ಶಾಲೆ ವಿರುದ್ಧ ದೂರು ಸಲ್ಲಿಸಲಾಗಿದೆ.

ಹಿಂದೂ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ: ಪಿಎಫ್‌ಐ ಕಾರ್ಯಕರ್ತರಿಂದ ಆಕ್ಷೇಪ

ಕೊಡಗಿನ ಪೊನ್ನಂಪೇಟೆ ಸಾಯಿ ಶಂಕರ ಶಾಲೆಯಲ್ಲಿ ಹಿಂದೂ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಲಾಗಿದೆ. ವಿಶ್ವ ಹಿಂದೂ ಪರಿಷತ್, ಭಜರಂಗದಳದ ದಕ್ಷಿಣ ಪ್ರಾಂತ್ಯದಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಮೂಲಕ ಭಯೋತ್ಪಾದನೆಗೆ ತರಬೇತಿ ನೀಡಲಾಗುತ್ತಿದೆ ಎಂದು ಎಸ್​​ಡಿಪಿಐ ಮತ್ತು ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆಗಳು ಆರೋಪಿಸಿವೆ. ಅಲ್ಲದೇ ಇವರ ವಿರುದ್ಧ ಭಯೋತ್ಪಾದನೆ ಕೃತ್ಯಕ್ಕೆ ಸಂಚು ಪ್ರಕರಣ ದಾಖಲಿಸಿ ಸೂಕ್ತ ರೀತಿಯಲ್ಲ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ದೂರು ಪ್ರತಿ

ಇದನ್ನೂ ಓದಿ:ಶಸ್ತ್ರಾಸ್ತ್ರ ತರಬೇತಿ ಪಡೆದ ಹಿಂದೂ ವಿದ್ಯಾರ್ಥಿಗಳು.. ಎಸ್​ಡಿಪಿಐ ಆಕ್ಷೇಪ

ABOUT THE AUTHOR

...view details