ಕರ್ನಾಟಕ

karnataka

ETV Bharat / state

ಮಡಿಕೇರಿಯಲ್ಲಿ ಅಸ್ಸಾಂ ಕಾರ್ಮಿಕರ ದಾಖಲಾತಿ ಪರಿಶೀಲನೆ - ಮಡಿಕೇರಿಯ ಕ್ರಿಸ್ಟಲ್ ಕೋರ್ಟ್ ಸಭಾಂಗಣ

ಮಡಿಕೇರಿಯ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಅಸ್ಸಾಂ ಕಾರ್ಮಿಕರ ದಾಖಲೆಗಳನ್ನು ಪೊಲೀಸ್ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ.

Assam workers enrollment check in Madikeri
ಅಸ್ಸಾಂ ಕಾರ್ಮಿಕರ ದಾಖಲಾತಿ ಪರಿಶೀಲನೆ

By

Published : Jan 23, 2020, 1:52 PM IST

ಕೊಡಗು: ಮಡಿಕೇರಿಯ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಅಸ್ಸಾಂ ಕಾರ್ಮಿಕರ ದಾಖಲೆಗಳನ್ನು ಪೊಲೀಸ್ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ.

ಅಸ್ಸಾಂ ಕಾರ್ಮಿಕರ ದಾಖಲಾತಿ ಪರಿಶೀಲನೆ

ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ ಸಾವಿರಾರು ಅಸ್ಸಾಂ ಮೂಲದ ಕಾರ್ಮಿಕರ ದಾಖಲಾತಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಕಾಫಿ ತೋಟಗಳಿಗೆ ರಜೆ ಮಾಡಿರುವ ಕಾರ್ಮಿಕರು, ಸರದಿಯಲ್ಲಿ ನಿಂತು ತಮ್ಮ ಮೂಲ ದಾಖಲೆಗಳನ್ನು ಹಾಜರು ಪಡಿಸುತ್ತಿದ್ದಾರೆ.

ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಗೋಲಿಬಾರ್ ಹಾಗೂ ವಿಧ್ವಂಸಕ ಕೃತ್ಯಗಳಿಗೆ ಉಗ್ರರು ವಿರಾಜಪೇಟೆ ಭಾಗದಲ್ಲಿಯೂ ಸಂಚು ರೂಪಿಸಿದ್ದರು. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಗೃಹ ಇಲಾಖೆ ವತಿಯಿಂದ ಅಸ್ಸಾಂ ಹಾಗೂ ಬಾಂಗ್ಲಾ ಮೂಲದ ಕೂಲಿ ಕಾರ್ಮಿಕರ ದಾಖಲಾತಿ ಪರಿಶೀಲನೆ ನಡೆಯುತ್ತಿದೆ. ಇದಕ್ಕೆ ಕಾಫಿ ತೋಟದ ಕಾರ್ಮಿಕರು ಸಹಕರಿಸಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ.

ABOUT THE AUTHOR

...view details