ಕರ್ನಾಟಕ

karnataka

ETV Bharat / state

ಕೊಡಗಿನಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಯತ್ನ - ಹಲ್ಲೆಗೆ ಯತ್ನ

ಆಶಾ ಕಾರ್ಯಕರ್ತೆ ಲತಾ ಮತ್ತು ಕಿರಿಯ ಆರೋಗ್ಯ ಸಹಾಯಕಿ ಜಲಜಾಕ್ಷಿ ಎಂಬುವವರು ಮಾಹಿತಿ ಪಡೆಯಲು ನಾಪೋಕ್ಲು ಬಳಿಕ ಪುದಿನೆರವನ ಬೋಪಯ್ಯ ಎಂಬ ನಿವೃತ್ತ ಯೋಧರ ಮನೆಗೆ ತೆರಳಿದ್ದ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಹಲ್ಲೆಗೆ ಮುಂದಾಗಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿವೆ.

ಹಲ್ಲೆಗೆ ಯತ್ನ
ಹಲ್ಲೆಗೆ ಯತ್ನ

By

Published : May 2, 2020, 11:46 AM IST

Updated : May 2, 2020, 3:36 PM IST

ಕೊಡಗು :ಕೊರೊನಾ ವಿರುದ್ಧದ ಸಮರ ಸೈನಿಕರೆಂದೇ ಹೆಸರಾಗಿರುವ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಲು ಮುಂದಾಗಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಾಪೋಕ್ಲುವಿನಲ್ಲಿ ನಡೆದಿದೆ ಎನ್ನಲಾಗಿದೆ.

ಹಲ್ಲೆಗೆ ಯತ್ನಿಸಿರುವ ಬಗ್ಗೆ ಆಶಾ ಕಾರ್ಯಕರ್ತೆ ವಿವರಣೆ

ಆಶಾ ಕಾರ್ಯಕರ್ತೆ ಲತಾ ಮತ್ತು ಕಿರಿಯ ಆರೋಗ್ಯ ಸಹಾಯಕಿ ಜಲಜಾಕ್ಷಿ ಎಂಬುವರು ಮಾಹಿತಿ ಪಡೆಯಲು ನಾಪೋಕ್ಲು ಬಳಿಯ ಪುದಿನೆರವನ ಬೋಪಯ್ಯ ಎಂಬ ನಿವೃತ್ತ ಯೋಧರ ಮನೆಗೆ ತೆರಳಿದ್ದ ವೇಳೆ, ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೆ ಮುಂದಾಗಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಈ ಸಂಬಂಧ ಆಶಾ ಕಾರ್ಯಕರ್ತೆಯರು ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಪೂರ್ಣಿಮಾ ಬಸಪ್ಪ, ಕೊರೊನಾ ಸಂಬಂಧಿತ ಮಾಹಿತಿ ಪಡೆಯುವ ನಿಟ್ಟಿನಲ್ಲಿ ತಿಂಗಳಿನಿಂದ ಅವಿರತ ಶ್ರಮಿಸುತ್ತಿರುವ ಕಾರ್ಯಕರ್ತೆ ಮತ್ತು ಕಿರಿಯ ಆರೋಗ್ಯ ಸಹಾಯಕಿ ಮೇಲೆ ಹಲ್ಲೆಗೆ ಮುಂದಾದ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಆರೋಪಿಯನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

Last Updated : May 2, 2020, 3:36 PM IST

ABOUT THE AUTHOR

...view details