ಕೊಡಗು: ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಉಂಟಾಗುತ್ತಿರುವ ಭೂಕುಸಿತದ ಉಂಟಾಗುವ ಕಾರಣ ಈ ಬಾರಿ ಮಳೆಗಾಲ ಆರಂಭವಾಗುತ್ತಿದ್ದಂತೆ ಬೃಹತ್ ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ.
ಕೊಡಗಿನ ರಸ್ತೆಗಳಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ - Anees Kanmani Joy news
ಕೊಡಗಿನಲ್ಲಿ ಈಗಾಗಲೇ ಮಳೆ ಆರಂಭವಾಗಿದ್ದು ಭೂಮಿಯಲ್ಲಿ ತೇವಾಂಶ ಜಾಸ್ತಿಯಾದಂತೆ ಭೂ ಕುಸಿತ ಆಗುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಆದೇಶ ಹೊರಡಿಸಿದೆ.
Joy
ಕೊಡಗಿನಲ್ಲಿ ಈಗಾಗಲೇ ಮಳೆ ಆರಂಭವಾಗಿದ್ದು ಭೂಮಿಯಲ್ಲಿ ತೇವಾಂಶ ಜಾಸ್ತಿಯಾದಂತೆ ಭೂಕುಸಿತ ಉಂಟಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿದೆ. ಹೀಗಾಗಿ ಬುಲೆಟ್ ಟ್ಯಾಂಕರ್ಸ್, ಕಂಟೈನರ್ ಗಾಡಿಗಳು ಸೇರಿದಂತೆ ಎಲ್ಲಾ ಬಗೆಯ ದೊಡ್ಡ ವಾಹನಗಳ ಓಡಾಟವನ್ನು ನಿರ್ಬಂಧಿಸಲಾಗಿದೆ.
ಅಲ್ಲದೆ ಮರದ ದಿಮ್ಮಿಗಳ ಸಾಗಾಟ ಮತ್ತು ಮರಳು ಸಾಗಾಟವನ್ನೂ ನಿಲ್ಲಿಸಲಾಗಿದೆ. ಈ ಆದೇಶ ಜೂನ್ 11 ರಿಂದ ಆಗಸ್ಟ್ 10 ವರೆಗೆ ಅಂದರೆ ಮುಂದಿನ ಎರಡು ತಿಂಗಳ ಕಾಲ ಜಾರಿಯಲ್ಲಿರುತ್ತದೆ.