ಕರ್ನಾಟಕ

karnataka

ETV Bharat / state

ಪೊಲೀಸ್ ಇಲಾಖೆಯೊಂದಿಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮಹತ್ವದ ಸಭೆ - Basavaraj Bommai latest news

ಗೃಹಸಚಿವ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಪೊಲೀಸ್​​ ಇಲಾಖೆ ಸಭೆ ನಡೆದಿದ್ದು, ಸಭೆಯಲ್ಲಿ ಐಜಿಪಿ ವಿಫುಲ್ ಕುಮಾರ್, ಎಸ್ಪಿ ಕ್ಷಮಾ ಮಿಶ್ರಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Basavaraj Bommai
ಗೃಹ ಸಚಿವ ಬಸವರಾಜ್ ಬೊಮ್ಮಾಯಿ

By

Published : Nov 6, 2020, 1:51 PM IST

ಕೊಡಗು: ಗೃಹಸಚಿವ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿಂದು ಪೊಲೀಸ್ ಇಲಾಖೆಯೊಂದಿಗೆ ಸಭೆ ನಡೆದಿದೆ. ಇದಕ್ಕೂ ಮೊದಲು ಜಿಲ್ಲಾ ಎಸ್ಪಿ ಕಚೇರಿಗೆ ಆಗಮಿಸಿದ ಸಚಿವ ಬೊಮ್ಮಾಯಿ ಪೊಲೀಸ್ ಗೌರವ ವಂದನೆ ಸ್ವೀಕರಿಸಿದರು.

ಜಿಲ್ಲಾ ಎಸ್ಪಿ ಕಚೇರಿಗೆ ಆಗಮಿಸಿದ ಸಚಿವ ಬೊಮ್ಮಾಯಿ

ಗೃಹಸಚಿವ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಪೊಲೀಸ್​​ ಇಲಾಖೆ ಸಭೆ ನಡೆದಿದ್ದು, ಸಭೆಯಲ್ಲಿ ಐಜಿಪಿ ವಿಫುಲ್ ಕುಮಾರ್, ಎಸ್ಪಿ ಕ್ಷಮಾಮಿಶ್ರಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಹಲವು ಮಹತ್ವದ ವಿಷಯಗಳನ್ನು ಈ ಸಭೆಯಲ್ಲಿ ಚರ್ಚೆ ನಡೆಸಿದರು ಎನ್ನಲಾಗಿದೆ.‌ ಕೊಡಗು - ಕೇರಳ ಗಡಿಯಲ್ಲಿ ನಕ್ಸಲ್ ಚಟುವಟಿಕೆ ಸಾಧ್ಯತೆ ಹಿನ್ನೆಲೆಯಲ್ಲಿ ನಕ್ಸಲ್ ವಿಷಯ ಕುರಿತು ಚರ್ಚೆ ನಡೆದಿದೆ. ಅಲ್ಲದೇ ಜಿಲ್ಲೆಯ ಪೊಲೀಸ್ ಇಲಾಖೆಯ ಕಾರ್ಯವೈಖರಿ ಬಗ್ಗೆಯೂ ಚರ್ಚೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.‌

ABOUT THE AUTHOR

...view details