ಕರ್ನಾಟಕ

karnataka

ETV Bharat / state

ಬ್ರಹ್ಮಗಿರಿ ಗುಡ್ಡ ಕುಸಿತ ದುರಂತ: ಮತ್ತೊಂದು ಮೃತದೇಹ ಪತ್ತೆ - ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ

ಬ್ರಹ್ಮಗಿರಿ ಗುಡ್ಡ ಕುಸಿದು ಹತ್ತು ದಿನಗಳ ಬಳಿಕ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮತ್ತೊಂದು ಮೃತದೇಹ ಪತ್ತೆಯಾಗಿದೆ.

Brahmagiri hill collapse
ಮತ್ತೊಂದು ಮೃತದೇಹ ಪತ್ತೆ

By

Published : Aug 15, 2020, 2:01 PM IST

ತಲಕಾವೇರಿ (ಕೊಡಗು):ಗುರುತಿಸಲು ಸಾಧ್ಯವಾಗದಂತಹ ಸ್ಥಿತಿಯಲ್ಲಿ ಮತ್ತೊಂದು ಮೃತದೇಹ ನಾಗತೀರ್ಥ ಸಮೀಪ ಪತ್ತೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಮತ್ತೊಂದು ಮೃತದೇಹ ಪತ್ತೆ

ಕೊಡಗಿನ ತಲಕಾವೇರಿಯಲ್ಲಿ ಬ್ರಹ್ಮಗಿರಿ ಗುಡ್ಡ ಕುಸಿದು ಕಣ್ಮರೆಯಾಗಿದ್ದ ಐವರ ಪೈಕಿ ಪ್ರಸ್ತುತ ಮೂವರ ಮೃತದೇಹಗಳು ಸಿಕ್ಕಿದಂತಾಗಿದೆ. ಹತ್ತು ದಿನಗಳ ಬಳಿಕ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮತ್ತೊಂದು ಮೃತದೇಹ ಪತ್ತೆಯಾಗಿದೆ. ನಾರಾಯಣ ಆಚಾರ್ ಮೃತದೇಹ ಪತ್ತೆಯಾದ ಜಾಗದ ಸ್ವಲ್ಪ ದೂರದಲ್ಲಿ ಶವ ಪತ್ತೆಯಾಗಿದೆ. ಆದರೆ ಅದು ಮಹಿಳೆ ಅಥವಾ ಪುರುಷನದೊ ಎಂದು ತಿಳಿಯುತ್ತಿಲ್ಲ.

ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹ ಯಾರದ್ದೆಂದು ತಿಳಿಯಲಿದ್ದು, ಸಂಜೆ ಶವ ಸಂಸ್ಕಾರ ನಡೆಯಲಿದೆ‌.‌ ಯಾವುದೇ ಕಾರಣಕ್ಕೂ ಕಾರ್ಯಾಚರಣೆಯನ್ನು ಕೈ ಬಿಡುವುದಿಲ್ಲ. ಎಲ್ಲರ ಮೃತದೇಹಗಳನ್ನು ಹೊರ ತಗೆಯುವರೆಗೂ ಕಾರ್ಯಾಚರಣೆ ನಡೆಸುತ್ತೇವೆ ಎಂದು ಸಚಿವರು ತಿಳಿಸಿದರು.

ABOUT THE AUTHOR

...view details