ಕೊಡಗು (ತಲಕಾವೇರಿ): ತಲಕಾವೇರಿಯ ಬ್ರಹ್ಮಗಿರಿಯಲ್ಲಿ ಬೆಟ್ಟ ಕುಸಿದು ಕಣ್ಮರೆಯಾಗಿದ್ದವರಿಗೆ ಎನ್‌ಡಿಆರ್‌ಎಫ್ ತಂಡ ತೀವ್ರ ಶೋಧ ನಡೆಸುತ್ತಿದೆ. ಈ ವೇಳೆ ಕಣ್ಮರೆಯಾದ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ ಅವರು ಬಳಸುತ್ತಿದ್ದ ಎರಡು ಕಾರುಗಳು ಪತ್ತೆಯಾಗಿವೆ.
ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣ: ಕಣ್ಮರೆಯಾದ ಕುಟುಂಬಕ್ಕೆ ಸೇರಿದ ಎರಡು ಕಾರುಗಳು ಪತ್ತೆ! - ಬ್ರಹ್ಮಗಿರಿ ಬೆಟ್ಟದಲ್ಲಿ ಎರಡು ಕಾರು ಪತ್ತೆ,
ತಲಕಾವೇರಿಯ ಬ್ರಹ್ಮಗಿರಿಯಲ್ಲಿ ಬೆಟ್ಟ ಕುಸಿದು ಕಣ್ಮರೆಯಾಗಿದ್ದವರ ಕುಟುಂಬಕ್ಕೆ ಸೇರಿದ್ದ ಎರಡು ಕಾರುಗಳು ಪತ್ತೆಯಾಗಿವೆ. ಈ ಬಗ್ಗೆ ನಮ್ಮ ಪ್ರತಿನಿಧಿ ಪ್ರತ್ಯಕ್ಷ ವರದಿ ನೀಡಿದ್ದಾರೆ.
ಕಣ್ಮರೆಯಾದ ಕುಟುಂಬಕ್ಕೆ ಸೇರಿದ ಎರಡು ಕಾರುಗಳು ಪತ್ತೆ
ಕಳೆದ ನಾಲ್ಕು ದಿನಗಳಿಂದ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಳಗ್ಗೆಯಿಂದಲೇ ಕಣ್ಮರೆಯಾದವರಿಗೆ ತೀವ್ರ ಶೋಧ ನಡೆಸುತ್ತಿದ್ದರು. ಈ ವೇಳೆ ನಾರಾಯಣ ಆಚಾರ್ ಬಳಸುತ್ತಿದ್ದ ರೆನಾಲ್ಟ್ ಡಸ್ಟರ್ ಹಾಗೂ ಮತ್ತೊಂದು ಓಮ್ನಿ ಸೇರಿದಂತೆ ಎರಡು ಕಾರುಗಳು ಸಂಪೂರ್ಣ ನುಜ್ಜುಗುಜ್ಜಾದ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಈಗಾಗಲೇ ದುರ್ಘಟನಾ ಸ್ಥಳದಲ್ಲಿ ಜೆಸಿಬಿ ಹಾಗೂ ಹಿಟಾಚಿಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ತಲಕಾವೇರಿಯಲ್ಲಿ ಅರ್ಚಕರಿಗೆ ಸೇರಿದ ವಸ್ತುಗಳು ಪತ್ತೆಯಾಗುತ್ತಿದ್ದು, ಕಣ್ಮರೆಯಾದವರು ಸಿಗುತ್ತಾರೆಯೇ ಎಂದು ಕಾದು ನೋಡಬೇಕಾಗಿದೆ.