ತಲಕಾವೇರಿ/ಭಾಗಮಂಡಲ:ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿದು ಕಣ್ಮರೆಯಾಗಿದ್ದ ಐವರಲ್ಲಿ ಒಬ್ಬರ ಮೃತ ದೇಹಪತ್ತೆಯಾಗಿದ್ದು, ಇನ್ನೂ ನಾಲ್ವರಿಗೆ ಎನ್‌ಡಿಆರ್‌ಎಫ್ ತಂಡ ತೀವ್ರ ಶೋಧ ನಡೆಸುತ್ತಿದೆ.
ಬ್ರಹ್ಮಗಿರಿ ಬೆಟ್ಟ ಕುಸಿತ: ಕೊಳೆತ ಸ್ಥಿತಿಯಲ್ಲಿ ಅರ್ಚಕರ ಶವ ಪತ್ತೆ, ಉಳಿದ ನಾಲ್ವರಿಗೆ ತೀವ್ರ ಶೋಧ - ಬ್ರಹ್ಮಗಿರಿ ಬೆಟ್ಟ ಕುಸಿತ
ತಲಕಾವೇರಿ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ ಅವರ ಅಣ್ಣ ಆನಂದ ತೀರ್ಥ ಸ್ವಾಮೀಜಿ (86) ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಮಳೆಯ ಅಬ್ಬರ ಮಧ್ಯಾಹ್ನದ ಬಳಿಕ ತಗ್ಗಿದ್ದು ಉಳಿದ ನಾಲ್ವರಿಗಾಗಿ ಎನ್‌ಡಿಆರ್‌ಎಫ್ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.
ತಲಕಾವೇರಿ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅಣ್ಣ ಆನಂದ ತೀರ್ಥ ಸ್ವಾಮೀಜಿ (86) ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಮಳೆಯ ಅಬ್ಬರ ಮಧ್ಯಾಹ್ನದ ಬಳಿಕ ತಗ್ಗಿದ ಹಿನ್ನೆಲೆಯಲ್ಲಿ ಎನ್‌ಡಿಆರ್‌ಎಫ್ ಸಿಬ್ಬಂದಿ ಕಣ್ಮರೆಯಾದವರ ಶೋಧಕ್ಕೆ ಹುಡುಕಾಟ ನಡೆಸಿದ್ದರು.
ಕಣ್ಮರೆಯಾದ ಐವರಲ್ಲಿ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್, ಅವರ ಪತ್ನಿ ಶಾಂತಾ ಹಾಗೂ ಇಬ್ಬರು ಸಹಾಯಕ ಅರ್ಚಕರ ಪತ್ತೆಗೆ ಸಿಬ್ಬಂದಿ ತೀವ್ರ ಶೋಧ ನಡೆಸಿದ್ದಾರೆ. ಬೆಳಗ್ಗೆಯಿಂದ ತಗ್ಗಿದ ಮಳೆ ಮತ್ತೆ ಅಬ್ಬರಿಸುತ್ತಿದ್ದು ಮಳೆ ಹೀಗೆ ಮುಂದುವರೆದರೆ ಕಾರ್ಯಾಚರಣೆಗೆ ಮತ್ತಷ್ಟು ತೊಡಕಾಗಲಿದೆ.