ಕರ್ನಾಟಕ

karnataka

By

Published : Nov 12, 2020, 7:08 PM IST

ETV Bharat / state

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ ಕೆ‌ಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು..!

ಮಡಿಕೇರಿಯಿಂದ-ಮಂಗಳೂರಿಗೆ ತೆರಳುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಮಡಿಕೇರಿಯ ಹೊರವಲಯದಲ್ಲಿ ಹಳ್ಳವೊಂದಕ್ಕೆ ನುಗ್ಗಿದ್ದು, ಅದೃಷ್ಟವಶಾತ್​​ ಭಾರೀ ಅನಾಹುತದಿಂದ ಪ್ರಯಾಣಿಕರು ಪಾರಾಗಿದ್ದಾರೆ.

Bus accident in madikeri
ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ ಕೆ‌ಎಸ್‌ಆರ್‌ಟಿಸಿ ಬಸ್

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್‌ಟಿಸಿ ಬಸ್‌ವೊಂದು ಹಳ್ಳಕ್ಕೆ ನುಗ್ಗಿರುವ ಘಟನೆ ಮಡಿಕೇರಿಯ ಹೊರವಲಯದಲ್ಲಿ ನಡೆದಿದೆ.

ಹಳ್ಳಕ್ಕೆ ಇಳಿದ ಕೆ‌ಎಸ್‌ಆರ್‌ಟಿಸಿ ಬಸ್

ಮಡಿಕೇರಿಯಿಂದ-ಮಂಗಳೂರಿಗೆ ರಾಜ್ಯ ರಸ್ತೆ ಸಾರಿಗೆ ಬಸ್ ತೆರಳುವ ವೇಳೆ ಈ ಅವಘಡ ಸಂಭವಿಸಿದೆ. ಘಟನೆ ಪರಿಣಾಮ ಬಸ್ ಚಾಲಕ ಸೇರಿ ಮುಂದಿನ ಸೀಟ್​ನಲ್ಲಿ ಕುಳಿತಿದ್ದ ಮಹಿಳೆಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ ಎಂದು ತಿಳಿದು ಬಂದಿದೆ.

ABOUT THE AUTHOR

...view details