ಕೊಡಗು : ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚಳವಾದ ಹಿನ್ನೆಲೆ ಕೊಡಗು-ಕೇರಳ ನಡುವೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೇರಳದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಜಿಲ್ಲೆಗೆ ಆಗಮಿಸುತ್ತಿರುವ ಕಾರಣ ಕೋವಿಡ್ ಹರಡುವ ಭೀತಿಯಿದೆ. ಈ ಕಾರಣಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.
ಕೊಡಗಿನಿಂದ ಯಾವುದೇ ಬಸ್ಗಳು ಕೇರಳಕ್ಕೆ ತೆರಳುವಂತಿಲ್ಲ ಮತ್ತು ಕೇರಳದಿಂದಲೂ ಕೊಡಗಿಗೆ ಬಸ್ಗಳು ಬರುವಂತಿಲ್ಲ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ.
ಓದಿ : RT-PCR Report ಇಲ್ಲದೆ ಬಂದವರಿಗೆ ಹುಬ್ಬಳ್ಳಿಯಲ್ಲಿ ಕ್ವಾರಂಟೈನ್
ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೋವಿಡ್ ಸೋಂಕು ಉಲ್ಬಣಗೊಂಡಿರುವ ಕಾರಣ ಜಿಲ್ಲೆಯ ಗಡಿಗಳಲ್ಲಿ ಹೆಚ್ಚು ನಿಗಾ ವಹಿಸಲಾಗಿದೆ. ಚೆಕ್ ಪೋಸ್ಟ್ಗಳಲ್ಲಿ ಪೊಲೀಸ್ ಕಣ್ಗಾವಲು ಇಡಲಾಗಿದ್ದು, ಆರ್ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿರುವವರನ್ನು ಮಾತ್ರ ಜಿಲ್ಲೆಯೊಳಗೆ ಬಿಡಲಾಗ್ತಿದೆ. ಹಾಗಾಗಿ, ಚೆಕ್ಪೋಸ್ಟ್ಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.
ಜಿಲ್ಲೆಯ ಪ್ರವಾಸಿ ತಾಣಗಳಲ್ಲೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ವೀಕೆಂಡ್ನಲ್ಲಿ ಪ್ರವಾಸಿ ತಾಣಗಳನ್ನು ಬಂದ್ ಮಾಡಲಾಗ್ತಿದೆ.