ಕರ್ನಾಟಕ

karnataka

ETV Bharat / state

ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಕೊಡಗು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು - ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ವಿವಿಧ ಕೊಡವ ಸಮಾಜಗಳ ನೇತೃತ್ವದಲ್ಲಿ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಿದ ಬಳಿಕ ರವಿ ಕುಶಾಲಪ್ಪ ಎಂಬುವರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

case filed
case filed

By

Published : Dec 21, 2020, 5:02 PM IST

Updated : Dec 21, 2020, 5:17 PM IST

ಕೊಡಗು: ಮುಸ್ಲಿಂ ಅಥವಾ ಕ್ರಿಶ್ಚಿಯನ್ ಧರ್ಮದವರು ಅಷ್ಟೇ ಅಲ್ಲ ಕೊಡವರು ಕೂಡ ಬೀಫ್ ತಿನ್ನುತ್ತಾರೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಡಿಕೇರಿ ತಾಲೂಕಿನ ಮುಕ್ಕೋಡ್ಲಿನವರಾದ, ರಾಜ್ಯ ಪಶ್ಚಿಮಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ರವಿ ಕುಶಾಲಪ್ಪ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಸಿದ್ದರಾಮಯ್ಯ ಹೇಳಿಕೆ ವಿರುದ್ಧ ದೂರು ದಾಖಲು

ಕೊಡವರು ಹಿಂದಿನಿಂದಲೂ ಗೋವುಗಳನ್ನು ಪೂಜ್ಯ ಭಾವನೆಯಿಂದ ಪೂಜಿಸುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ಕೊಡವರಿಗೆ ಅಪಮಾನ ಮಾಡಿರುವುದಕ್ಕಾಗಿ ಮತ್ತು ಹಿಂದೂ ಮುಸನ್ಮಾನರ ನಡುವೆ ಗಲಾಟೆ ಮಾಡಿಸಿ ಸಮಾಜದ ಶಾಂತಿ ಹಾಳು ಮಾಡುವ ದುರುದ್ದೇಶದಿಂದ ಇಂತಹ ಹೇಳಿಕೆ ನೀಡಿದ್ದಾರೆ. ಕೊಡವರು ಬೀಫ್ ತಿನ್ನುತ್ತಾರೆಂದು ಹೇಳಿರುವುದು ವೈಯಕ್ತಿಕವಾಗಿ ನನಗೂ ಅಪಮಾನವಾಗಿದೆ ಎಂದು ಸಿದ್ದರಾಮಯ್ಯ ವಿರುದ್ಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬಹಿರಂಗ ಭಾಷಣ ಮಾಡಿದ್ದ ಸಿದ್ದರಾಮಯ್ಯ, ಕೊಡಗಿಗೆ ಬಂದು ಬಹಿರಂಗವಾಗಿ ಕೊಡವರ ಕ್ಷಮೆ ಕೇಳಬೇಕು ಎಂದು ಕೊಡವರು ಆಗ್ರಹಿಸಿದ್ದಾರೆ. ಇಂದು ವಿವಿಧ ಕೊಡವ ಸಮಾಜಗಳ ನೇತೃತ್ವದಲ್ಲಿ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಿದರು. ಬಳಿಕ ರವಿ ಕುಶಾಲಪ್ಪ, ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Last Updated : Dec 21, 2020, 5:17 PM IST

ABOUT THE AUTHOR

...view details