ಕರ್ನಾಟಕ

karnataka

ETV Bharat / state

ಕೊಡಗಿನಲ್ಲಿ ಭಾರಿ ಮಳೆ ಸಾಧ್ಯತೆ: ಯೆಲ್ಲೊ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ - ಭಾರತೀಯ ಹವಾಮಾನ ಇಲಾಖೆ

ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ ಸೂಚನೆ ಮೇರೆಗೆ ಜುಲೈ 5ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

Chances of heavy rain, yellow alert in kodagu
ಕೊಡಗಿನಲ್ಲಿ ಭಾರಿ ಮಳೆ ಸಾಧ್ಯತೆ

By

Published : Jul 3, 2020, 8:23 AM IST

ಕೊಡಗು: ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಸೂಚನೆ ಮೇರೆಗೆ ಜುಲೈ 5ರವರೆಗೆ ಜಿಲ್ಲಾಡಳಿತ ಯೆಲ್ಲೊ ಅಲರ್ಟ್ ಘೋಷಿಸಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡು ಸೇರಿದಂತೆ ಜಿಲ್ಲೆಯಲ್ಲಿ ಇಂದು ರಾತ್ರಿಯಿಂದ ಜುಲೈ 5ರವರೆಗೆ ವ್ಯಾಪಕವಾಗಿ ಮಳೆ ಆಗಲಿದೆ. 64.5 ಮಿ.ಮೀ.ನಿಂದ 115.5 ಮಿ.ಮೀ.ವರೆಗೆ ಮಳೆ ಬೀಳುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.‌

ಹೀಗಾಗಿ ತುರ್ತು ಸಂದರ್ಭದಲ್ಲಿ ಸಹಾಯಕ್ಕಾಗಿ ಜಿಲ್ಲಾಧಿಕಾರಿಗಳ ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ 1077ಗೆ ಸಂಪರ್ಕಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ABOUT THE AUTHOR

...view details